ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » 2012ರಾಷ್ಟ್ರಾಧ್ಯಕ್ಷ ಚುನಾವಣೆ ಸ್ಪರ್ಧೆಗೆ ಚಿಂತನೆ:ಪುಟಿನ್ (Russia | PM | Vladimir Putin)
Bookmark and Share Feedback Print
 
ಸರಕಾರಿ ಟೆಲಿವಿಜನ್‌ಗೆ ಸುಮಾರು ನಾಲ್ಕು ಗಂಟೆಗಳ ಕಾಲ ಸಂದರ್ಶನ ನೀಡಿದ ರಷ್ಯಾದ ಅಧ್ಯಕ್ಷ ವ್ಲಾಡಿಮೀರ್ ಪುಟಿನ್, ಮುಂಬರುವ 2012ರ ರಾಷ್ಟ್ರಾಧ್ಯಕ್ಷ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಂತೆ ಚಿಂತನೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ದೂರದರ್ಶನದ ಪ್ರಶ್ನೋತ್ತರ ವೇಳೆಯಲ್ಲಿ ಪುಟಿನ್ ತಾವು ಕೂಡಾ ರಾಷ್ಟ್ರಾಧ್ಯಕ್ಷ ಹುದ್ದೆಗೆ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿ,ರಷ್ಯಾದ ರಾಜಕೀಯದಲ್ಲಿ ತಮ್ಮ ಪ್ರಭಾವ ಮುಂದುವರಿಯಲಿದೆ ಎನ್ನುವ ಸಂಕೇತವನ್ನು ನೀಡಿದ್ದಾರೆ ಎಂದು ರಷ್ಯಾ ಮೂಲಗಳು ತಿಳಿಸಿವೆ.

ಮುಂಬರುವ ರಾಷ್ಟ್ರಾಧ್ಯಕ್ಷ ಚುನಾವಣೆಯಲ್ಲಿ ತಾವು ಸ್ಪರ್ಧಿಸುತ್ತಿರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಪುಟಿನ್, 2012ರಲ್ಲಿ ನಡೆಯಲಿರುವ ರಾಷ್ಟ್ರಾಧ್ಯಕ್ಷ ಚುನಾವಣೆಗೆ ತುಂಬಾ ಸಮಯವಿರುವುದರಿಂದ ಸ್ಪರ್ಧಿಸುವ ಬಗ್ಗೆ ವಿಚಾರ ಮಾಡುತ್ತೇನೆ ಎಂದು ಹೇಳಿದ್ದಾರೆ.

ಪ್ರಸ್ತುತ ನಾನು ದೇಶದ ಪ್ರಧಾನಿಯಾಗಿರುವುದರಿಂದ ಪ್ರಧಾನಿಯ ಕರ್ತವ್ಯವನ್ನು ನಿರ್ವಹಿಸುತ್ತೇನೆ ಎಂದು ರಷ್ಯಾದ ಪ್ರಧಾನಿ ಪುಟಿನ್ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ