ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ರಾಬರ್ಟ್ ಬ್ಲೇಕ್ ಶ್ರೀಲಂಕಾಗೆ ಭೇಟಿ (Robert Blake | Sri Lanka | IDP)
Bookmark and Share Feedback Print
 
ದಕ್ಷಿಣ ಮತ್ತು ಕೇಂದ್ರ ಏಷ್ಯಾದ ಉಸ್ತುವಾರಿಯನ್ನು ಹೊತ್ತಿರುವ ಅಮೆರಿಕದ ಸಹಾಯಕ ಕಾರ್ಯದರ್ಶೀ ರಾಬರ್ಟ್ ಬ್ಲೇಕ್ ಮುಂದಿನ ವಾರದಲ್ಲಿ ಶ್ರೀಲಂಕಾಗೆ ಭೇಟಿ ನೀಡಲಿದ್ದಾರೆ.ಲಂಕಾದಲ್ಲಿ ಸರಕಾರಿ ಅಧಿಕಾರಿಗಳು ರಾಜಕೀಯ ನಾಯಕರುಗಳು ಮತ್ತು ಸಂಘ ಸಂಸ್ಥೆಗಳ ಮುಖಂಡರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಬರ್ಟ್ ಬ್ಲೇಕ್, ಶ್ರೀಲಂಕಾಗೆ 8-9ರಂದು ಭೇಟಿ ನೀಡಲಿದ್ದು, ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಲಿದ್ದಾರೆ ಎಂದು ಅಮೆರಿಕದ ವಿದೇಶಾಂಗ ವ್ಯವಹಾರಗಳ ಇಲಾಖೆ ಪ್ರಕಟಿಸಿದೆ.

ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರು ಅಧಿಕಾರ ವಹಿಸಿಕೊಂಡ ನಂತರ ಬ್ಲೇಕ್ ವಿದೇಶಾಂಗ ಸಹಾಯಕ ಕಾರ್ಯದರ್ಶಿಯಾಗಿ ಹುದ್ದೆಯನ್ನು ಅಲಂಕರಿಸಿದ್ದು, ಪ್ರಥಮ ಬಾರಿಗೆ ಶ್ರೀಲಂಕಾಗೆ ಭೇಟಿ ನೀಡಲಿದ್ದಾರೆ.ಅಧಿಕಾರ ವಹಿಸಿಕೊಳ್ಳುವ ಮುನ್ನ ಲಂಕಾದಲ್ಲಿ ಅಮೆರಿಕದ ರಾಯಭಾರಿಯಾಗಿ ಕಾರ್ಯನಿರ್ವಹಿಸಿದ್ದರು.
ಸಂಬಂಧಿತ ಮಾಹಿತಿ ಹುಡುಕಿ