ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕಿಸ್ತಾನ:ಸ್ಫೋಟ ಪ್ರಕರಣ-ಐವರು ಉಗ್ರರ ಬಂಧನ (al-Qaida | Taliban | Peshawar | Pakistan | South Waziristan)
Bookmark and Share Feedback Print
 
ಪಾಕಿಸ್ತಾನದ ನಗರವಾಗಿರುವ ಪೇಶಾವರದಲ್ಲಿ ಇತ್ತೀಚೆಗಷ್ಟೇ ನಡೆದ ಬಾಂಬ್ ಸ್ಫೋಟ ಹಾಗೂ ದಾಳಿಗೆ ಸಂಬಂಧಿಸಿದಂತೆ ಉಗ್ರರ ವಿರುದ್ಧ ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಸಾವನ್ನಪ್ಪಿದ್ದು, ಉಳಿದ ಐವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪೇಶಾವರದ ಕಾಕಾ ಖೇಲ್ ಗ್ರಾಮದಲ್ಲಿ ಭಾನುವಾರ ಕಮಾಂಡೋ ಕಾರ್ಯಾಚರಣೆ ನಡೆಸಿದ್ದು, ಈ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರ ಸಾವನ್ನಪ್ಪಿದ್ದು, ಉಳಿದ ಐದು ಮಂದಿಯನ್ನು ಸೆರೆ ಹಿಡಿಯಲಾಗಿದೆ ಎಂದು ಪೊಲೀಸ್ ವರಿಷ್ಠ ಲಿಯಾಖತ್ ಅಲಿ ಖಾನ್ ತಿಳಿಸಿದ್ದಾರೆ.

ಬಂಧಿತ ಐವರು ಉಗ್ರರಲ್ಲಿ ಇಬ್ಬರು ಗಾಯಗೊಂಡಿದ್ದು, ದಾಳಿ ನಡೆಸಿದ ಪ್ರದೇಶದಲ್ಲಿ ಸ್ಫೋಟಕ ವಸ್ತು ಹಾಗೂ ಇನ್ನಿತರ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ