ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕಿಸ್ತಾನ: ಅವಳಿ ಬಾಂಬ್ ಸ್ಫೋಟಕ್ಕೆ 46 ಬಲಿ (Taliban | Pakistan | Peshawar | bomb attacks)
Bookmark and Share Feedback Print
 
ಪಾಕಿಸ್ತಾನದ ಪ್ರಮುಖ ನಗರದಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಅವಳಿ ಬಾಂಬ್ ಸ್ಫೋಟದಲ್ಲಿ ಸುಮಾರು 46ಮಂದಿ ಸಾವನ್ನಪ್ಪಿದ್ದು, ನೂರಕ್ಕೂ ಅಧಿಕ ಜನರು ಗಾಯಗೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪಂಜಾಬ್ ಪ್ರಾಂತ್ಯದ ಜನನಿಭಿಡ ಮಾರ್ಕೆಟ್‌ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟದವೊಂದರಲ್ಲಿಯೇ ಕನಿಷ್ಠ 36ಮಂದಿ ಸಾವನ್ನಪ್ಪಿದ್ದರೆ, ಪೇಶಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ 10ಮಂದಿ ಬಲಿಯಾಗಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಪಾಕಿಸ್ತಾನದ ವಾಯುವ್ಯ ಭಾಗದಲ್ಲಿ ತಾಲಿಬಾನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆ ನಡೆಸಿರುವುದನ್ನು ಆಕ್ಷೇಪಿಸಿ ಮೂಲಭೂತವಾದಿ ಉಗ್ರರ ಗುಂಪು ಈ ದುಷ್ಕೃತ್ಯ ನಡೆಸಿರುವುದಾಗಿ ಅಧಿಕಾರಿಗಳು ವಿವರಿಸಿದ್ದಾರೆ. ತಾಲಿಬಾನ್ ಹಾಗೂ ಅಲ್ ಖಾಯಿದಾ ಉಗ್ರರನ್ನು ಮಟ್ಟಹಾಕುವ ನಿಟ್ಟಿನಲ್ಲಿ ಅಮೆರಿಕ ಮತ್ತು ಪಾಕ್ ಮಿಲಿಟರಿ ಪಡೆ ತೀವ್ರ ಕಾರ್ಯಾಚರಣೆ ನಡೆಸುತ್ತಿರುವುದು ಉಗ್ರರ ಕೆಂಗಣ್ಣಿಗೆ ಗುರಿಯಾಗಿದೆ.

ಲಾಹೋರ್ ನಗರದಲ್ಲಿನ ಪ್ರಸಿದ್ಧ ಮೂನ್ ಮಾರ್ಕೆಟ್ ಪ್ರದೇಶದಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಹಲವು ಅಂಗಡಿಗಳು ಧ್ವಂಸಗೊಂಡಿವೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ