ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಭಾರತಕ್ಕೆ ಇಸ್ರೇಲ್ ಸೇನಾ ಮುಖ್ಯಸ್ಥರ ಭೇಟಿ (Israeli | Chief of Staff | Gabi | India visit)
Bookmark and Share Feedback Print
 
ಇಸ್ರೇಲ್‌ನ ಸೇನಾ ಮುಖ್ಯಸ್ಥ ಗಬಿ ಅಶ್‌ಕೆನಾಜಿ ಭಾರತಕ್ಕೆ ಮೂರು ದಿನಗಳ ಅವಧಿಗೆ ಭೇಟಿ ನೀಡಲಿದ್ದು, ದೇಶದ ಹಿರಿಯ ಭಧ್ರತಾ ಅಧಿಕಾರಿಗಳೊಂದಿಗೆ ದ್ವಿಪಕ್ಷೀಯ ರಕ್ಷಣಾ ಒಪ್ಪಂದಗಳ ಕುರಿತಂತೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇಸ್ರೇಲ್ ಸೇನಾ ಮುಖ್ಯಸ್ಥರ ಭಾರತ ಭೇಟಿಯಿಂದಾಗಿ ಉಭಯ ದೇಶಗಳ ನಡುವಿನ ಸಂಬಂಧಗಳನ್ನು ಬಲಪಡಿಸುವುದು ಹಾಗೂ ರಕ್ಷಣಾ ಕ್ಷೇತ್ರದಲ್ಲಿ ಸಹಕಾರ ನೀಡುವುದಾಗಿದೆ ಎಂದು ಇಸ್ರೇಲ್‌ ಸೇನಾ ವಕ್ತಾರರು ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

1992ರಲ್ಲಿ ಉಭಯ ದೇಶಗಳ ನಡುವೆ ನಡೆದ ರಾಜಕೀಯ ಒಪ್ಪಂದಗಳ ನಂತರ ಇಸ್ರೇಲ್ ಸೇನಾ ಮುಖ್ಯಸ್ಥ ಆಶ್‌ಕೆನಾಜಿ ಪ್ರಥಮ ಬಾರಿಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ.

ಭಾರತದ ಸೇನಾ ಮುಖ್ಯಸ್ಥರಾದ ಜನರಲ್ ದೀಪಕ್ ಕಪೂರ್ ಇಸ್ರೇಲ್‌ಗೆ ಭೇಟಿ ನೀಡಿದ ಸುಮಾರು ಒಂದು ತಿಂಗಳ ನಂತರ, ಇಸ್ರೇಲ್ ಸೇನಾ ಮುಖ್ಯಸ್ಥ ಆಶ್‌ಕೆನಾಜಿ ಭಾರತಕ್ಕೆ ಭೇಟಿ ನೀಡಲಿದ್ದು, ರಕ್ಷಣಾ ಕ್ಷೇತ್ರದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ಸೇನಾಮೂಲಗಳು ತಿಳಿಸಿವೆ.

ಇಸ್ರೇಲ್ ಸೇನಾ ಮುಖ್ಯಸ್ಥ ಆಶ್‌ಕೆನಾಜಿ ಭಾರತದ ಸೇನಾ ಮುಖ್ಯಸ್ಥ ಕಪೂರ್, ರಾಷ್ಟ್ರೀಯ ಭಧ್ರತಾ ಸಲಹೆಗಾರ ಎಂ.ಕೆ.ನಾರಾಯಣನ್‌ ಹಾಗೂ ನೌಕಾಪಡೆ ಮತ್ತು ವಾಯುದಳದ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಇಸ್ರೇಲ್‌ ನಿಯೋಗದಲ್ಲಿ ಅಂತಾರಾಷ್ಟ್ರೀಯ ಸೇನಾ ಸಹಕಾರ ಇಲಾಖೆಯ ಮುಖ್ಯಸ್ಥ ಕರ್ನಲ್ ಡಾನ್ ಹೆಫೆಝ್, ಕರ್ನಲ್ ಯೊಸ್ಸಿ ರಫಾಲೊವ್ ಮತ್ತು ಇತರ ಗಣ್ಯರು ಭಾರತಕ್ಕೆ ಆಗಮಿಸಿದ್ದಾರೆ ಎಂದು ಇಸ್ರೇಲ್ ಸೇನಾ ವಕ್ತಾರರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ