ಅಫ್ಘಾನಿಸ್ತಾನಕ್ಕೆ 30 ಸಾವಿರ ಹೆಚ್ಚುವರಿ ಸೇನಾಪಡೆಗಳನ್ನು ರವಾನಿಸುವುದಾಗಿ ಹೇಳಿಕೆ ನೀಡಿದ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ, ನೊಬೆಲ್ ಶಾಂತಿ ಬಹುಮಾನವನ್ನು ಸ್ವೀಕರಿಸಲಿದ್ದಾರೆ ಎಂದು ಶ್ವೇತಭವನದ ಮೂಲಗಳು ತಿಳಿಸಿವೆ.
ಯುದ್ಧಘೋಷಿತ ಅಧ್ಯಕ್ಷರಾಗಿ ಬರಾಕ್ ಒಬಾಮಾ ನೊಬೆಲ್ ಶಾಂತಿ ಬಹುಮಾನವನ್ನು ಸ್ವೀಕರಿಸಲಿದ್ದಾರೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಶ್ವೇತ ಭವನದ ವಕ್ತಾರ ರಾಬರ್ಟ್ ಗಿಬ್ಸ್ 'ಹೌದು' ಯುದ್ಧಘೋಷಿತ ಅಧ್ಯಕ್ಷ ಬರಾಕ್ ಒಬಾಮಾ ನೊಬೆಲ್ ಶಾಂತಿ ಬಹುಮಾನವನ್ನು ಸ್ವೀಕರಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ, ನೊಬೆಲ್ ಶಾಂತಿ ಬಹುಮಾನ ಸ್ವೀಕರಿಸುವ ಸಮಯದಲ್ಲಿ ಅಫ್ಘಾನಿಸ್ತಾನಕ್ಕೆ ಹೆಚ್ಚುವರಿ ಸೇನಾಪಡೆಗಳನ್ನು ಕಳುಹಿಸುವ ಕುರಿತಂತೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಭಾಷಣ, ಹಲವರಲ್ಲಿ ಅಚ್ಚರಿ ಮೂಡಿಸಿದೆ ತಿಳಿಸಿದ್ದಾರೆ.
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ, ಮುಂದಿನ ವಾರ ಒಸ್ಲೊದಲ್ಲಿ ನಡೆಯಲಿರುವ ಸಮಾರಂಭದಲ್ಲಿ 2009ರ ಸಾಲಿನ ನೊಬೆಲ್ ಶಾಂತಿ ಪುರಸ್ಕಾರವನ್ನು ಸ್ವೀಕರಿಸಲಿದ್ದಾರೆ ಎಂದು ವಕ್ತಾರ ಗಿಬ್ಸ್ ಹೇಳಿದ್ದಾರೆ.