ತೈವಾನ್‌ಗೆ ಅಮೆರಿಕ ಅತ್ಯಾಧುನಿಕ ಶಸ್ತ್ರಾಸ್ತ್ರ ಪೂರೈಸುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಚೀನಾ ಅಮೆರಿಕೆಗೆ ಎಚ್ಚರಿಕೆ ನೀಡಿದೆ.ಒಬಾಮಾ ಅಡಳಿತದ ಅಧಿಕಾರಿಗಳು ಇತ್ತಿಚೆಗೆ ಹೇಳಿಕೆಯೊಂದನ್ನು ನೀಡಿ, ತೈವಾನ್‌ಗೆ ಸಬ್‌ಮರೈನ್ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಮಾರಾಟ ಮಾಡುವುದಾಗಿ ಹೇಳಿದ್ದರಿಂದ ಚೀನಾ ಅಕ್ರೋಶಗೊಂಡಿದೆ.
ತೈವಾನ್‌ಗೆ ಅಮೆರಿಕ ಶಸ್ತ್ರಾಸ್ತ್ರಗಳ ಮಾರಾಟವನ್ನು ನಾವು ವಿರೋಧಿಸುತ್ತೇವೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರೆ ಜಿಯಾಂಗ್ ಯು ಹೇಳಿದ್ದಾರೆ.
ತೈವಾನ್‌ಗೆ ಶಸ್ತ್ರಾಸ್ತ್ರ ಸರಬರಾಜು ವಿಷಯ ಕುರಿತಂತೆ ನಮ್ಮ ನಿಲುವು ಸ್ಪಷ್ಟವಾಗಿದೆ. ಅಮೆರಿಕ ತನ್ನ ನಿಲುವುಗಳಿಗೆ ಬದ್ಧವಾಗಿರಬೇಕು. ತೈವಾನ್‌ಗೆ ಶಸ್ತ್ರಾಸ್ತ್ರಗಳನ್ನು ಮಾಡುವ ಬಗ್ಗೆ ಅಮೆರಿಕ ಮರುಪರಿಶೀಲಿಸಬೇಕು ಎಂದು ತಿಳಿಸಿದ್ದಾರೆ.
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅಡಳಿತ ಡೀಸೆಲ್-ಎಲೆಕ್ಟ್ರಿಕ್ ಸಬ್‌ಮರೈನ್ ಶಸ್ತ್ರಾಸ್ತ್ರಗಳನ್ನು ಮಾರಾಟ ಮಾಡುವ ಸಾಧ್ಯತೆಗಳಿವೆ ಎಂದು ಅಮೆರಿಕ ರಕ್ಷಣಾ ಸಚಿವಾಲಯದ ಸಹಾಯಕ ಕಾರ್ಯದರ್ಶಿ ರಾಬರ್ಟ್ ಕೊವಾಕ್ ತಿಳಿಸಿದ್ದಾರೆ.