ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಗಿಲಾನಿ ಯು ಟರ್ನ್:ತಾಲಿಬಾನ್ ವಿರುದ್ಧ ದಾಳಿ ಮುಂದುವರಿಯಲಿದೆ (Gilani | Taliban | Pakistan | South Waziristan | Tehrik-e-Taliban)
Bookmark and Share Feedback Print
 
ದಕ್ಷಿಣ ವಜಿರಿಸ್ತಾನ ಬುಡಕಟ್ಟು ಪ್ರಾಂತ್ಯದಲ್ಲಿ ತಾಲಿಬಾನ್ ಉಗ್ರರ ವಿರುದ್ಧ ಪಾಕಿಸ್ತಾನ ಮಿಲಿಟರಿ ಪಡೆ ನಡೆಸುತ್ತಿದ್ದ ಕಾರ್ಯಾಚರಣೆ ಅಂತ್ಯಗೊಂಡಿರುವುದಾಗಿ ಪ್ರಧಾನಿ ಯೂಸೂಫ್ ರಾಜಾ ಗಿಲಾನಿ ಹೇಳಿಕೆ ನೀಡಿದ ಬೆನ್ನಲ್ಲೇ, ಯು ಟರ್ನ್ ಎಂಬಂತೆ ದಕ್ಷಿಣ ವಜಿರಿಸ್ತಾನದಲ್ಲಿ ತಾಲಿಬಾನ್ ವಿರುದ್ದ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ದಕ್ಷಿಣ ವಜಿರಿಸ್ತಾನದಲ್ಲಿ ತೆಹ್ರೀಕ್ ಇ ತಾಲಿಬಾನ್ ವಿರುದ್ಧ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆ ಅಂತ್ಯಗೊಂಡಿರುವುದಾಗಿ ಗಿಲಾನಿ ಭಾನುವಾರ ಲಾಹೋರ್‌ನಲ್ಲಿ ತಿಳಿಸಿದ್ದರು.

ಆದರೆ ಗಂಟೆಯ ಬಳಿಕ ಕರಾಚಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಗಿಲಾನಿ, ದಕ್ಷಿಣ ವಜಿರಿಸ್ತಾನದಲ್ಲಿ ತಾಲಿಬಾನ್ ವಿರುದ್ಧದ ಮಿಲಿಟರಿ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಹೇಳುವ ಮೂಲಕ ಯು ಟರ್ನ್ ನೀಡಿದ್ದಾರೆ.

ಉಗ್ರರನ್ನು ಸದೆಬಡಿಯುವ ಕಾರ್ಯಾಚರಣೆಯಲ್ಲಿ ದೊಡ್ಡ ಯಶಸ್ಸು ಸಾಧಿಸುವುದಾಗಿ ಅವರು ಈ ಸಂದರ್ಭದಲ್ಲಿ ವಿಶ್ವಾಸವ್ಯಕ್ತಪಡಿಸಿದರು. ಅಲ್ಲದೇ, ಉಗ್ರರ ಕಪಿಮುಷ್ಠಿಯಲ್ಲಿರುವ ಪ್ರದೇಶಗಳನ್ನು ವಶಕ್ಕೆ ತೆಗೆದುಕೊಂಡಿರುವುದಾಗಿಯೂ ವಿವರಿಸಿದರು.
ಸಂಬಂಧಿತ ಮಾಹಿತಿ ಹುಡುಕಿ