ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಕೋಪನ್‌ಹೇಗನ್: ಯುಎನ್ ವಿರುದ್ಧ ಭಾರೀ ಪ್ರತಿಭಟನೆ (UN | Copenhagen | Police | Bella Center | global climate)
Bookmark and Share Feedback Print
 
ಇಲ್ಲಿ ನಡೆಯುತ್ತಿರುವ ಹವಾಮಾನ ವೈಪರೀತ್ಯ ಕುರಿತ ಅಂತಿಮ ನಿರ್ಧಾರದ ಮಾತುಕತೆ ವಿರುದ್ಧ ಬುಧವಾರ ಭಾರೀ ಪ್ರತಿಭಟನೆ ವ್ಯಕ್ತವಾಗಿದ್ದು, ಪ್ರತಿಭಟನಾಕಾರರಮ ಮೇಲೆ ಅಶ್ರುವಾಯು ಸಿಡಿಸಿದ ಪೊಲೀಸರು, ಸುಮಾರು ನೂರಕ್ಕೂ ಅಧಿಕ ಮಂದಿಯನ್ನು ಬಂಧಿಸಿರುವುದಾಗಿ ಪೊಲೀಸ್ ವಕ್ತಾರರೊಬ್ಬರು ತಿಳಿಸಿದ್ದಾರೆ.

ಹವಾಮಾನ ವೈಪರೀತ್ಯ ತಡೆ ಕುರಿತಂತೆ ಯುನೈಟೆಡ್ ನೇಷನ್ಸ್ ನಿರ್ಲಕ್ಷ್ಯ ಧೋರಣೆ ತಾಳಿರುವುದನ್ನು ವಿರೋಧಿಸಿ ಸಾವಿರಾರು ಮಂದಿ ಪ್ರತಿಭಟನೆ ನಡೆಸಿದರು.

ಬೆಲ್ಲಾ ಸೆಂಟರ್ ರೈಲ್ವೆ ನಿಲ್ದಾಣದ ಸಮೀಪ ಪ್ರತಿಭಟನಾಕಾರರನ್ನು ಬಂಧಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಸಮಾವೇಶಕ್ಕೆ ಸಂಬಂಧಿಸಿದಂತೆ ತೀವ್ರ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಮೆಟ್ರೋ ರೈಲು ಸಂಚಾರ ತಡೆಯಲು ಯತ್ನಿಸಿದ್ದರು. ಆ ಸಂದರ್ಭದಲ್ಲಿ ಪೊಲೀಸರು ಅಶ್ರುವಾಯು ಸಿಡಿಸಿ ಪ್ರತಿಭಟನಾಕಾರರನ್ನು ಚದುರಿಸಿ, ಹಲವರನ್ನು ಬಂಧಿಸಿದರು.

ಹವಾಮಾನ ವೈಪರೀತ್ಯ ತಡೆ ಕುರಿತಂತೆ 194ದೇಶಗಳು ಇದೀಗ ನೂತನ ಒಪ್ಪಂದವೊಂದಕ್ಕೆ ಬರಲು ಮಾತುಕತೆ ನಡೆಸುತ್ತಿವೆ. ಆ ನಿಟ್ಟಿನಲ್ಲಿ ಸಮಾವೇಶ ನಡೆಸುತ್ತಿದ್ದ ಸ್ಥಳದಲ್ಲಿ ಭಾರೀ ಬಂದೋಬಸ್ತ್ ಏರ್ಪಡಿಸಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ