ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕ್: ರೆಹಮಾನ್ ಮಲ್ಲಿಕ್ ವಿರುದ್ಧ ಬಂಧನದ ವಾರಂಟ್ ಜಾರಿ (Rehman Mallik | Pak court | arrest warrant | Zardari)
Bookmark and Share Feedback Print
 
ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಪಾಕಿಸ್ತಾನದ ಆಂತರಿಕ ಸಚಿವ ರೆಹಮಾನ್ ಮಲ್ಲಿಕ್ ವಿರುದ್ಧ ಪಾಕಿಸ್ತಾನದ ಭ್ರಷ್ಟಚಾರ ನಿಗ್ರಹ ನ್ಯಾಯಾಲಯ ಶುಕ್ರವಾರ ಬಂಧನದ ವಾರಂಟ್ ಅನ್ನು ಜಾರಿಗೊಳಿಸಿದೆ.

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ 248ಮಂದಿಯಲ್ಲಿ ಮಲ್ಲಿಕ್ ಕೂಡ ಒಬ್ಬರಾಗಿದ್ದಾರೆ. ಅಲ್ಲದೇ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವವರು ವಿದೇಶ ಪ್ರವಾಸಕ್ಕೆ ತೆರಳದಂತೆ ರಾಜ್ಯ ಭ್ರಷ್ಟಾಚಾರ ನಿಗ್ರಹ ದಳ ನಿಷೇಧ ಹೇರಿದೆ. ರಕ್ಷಣಾ ಸಚಿವ ಚೌಧುರಿ ಅಹ್ಮದ್ ಮುಖ್ತಾರ್ ಅವರು ಕೂಡ ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದು, ಅವರು ಕೂಡ ದೇಶ ಬಿಟ್ಟು ತೆರಳಲು ಸಜ್ಜಾಗುತ್ತಿದ್ದಂತೆಯೇ ನಿಷೇಧ ಹೇರಿದ ಬೆನ್ನಲ್ಲೇ, ಈ ಬೆಳವಣಿಗೆ ನಡೆದಿದೆ.

ಈ ಹಿಂದೆ ಜರ್ದಾರಿ ಮತ್ತು ಇತರ 8,000ಕ್ಕೂ ಹೆಚ್ಚು ಮಂದಿಯ ವಿರುದ್ಧ ದಾಖಲಾಗಿದ್ದ ಅಕ್ರಮ ಆಸ್ತಿ ಗಳಿಕೆ ಸೇರಿದಂತೆ ಭ್ರಷ್ಟಾಚಾರ ಪ್ರಕರಣಗಳಿಂದ 'ರಾಷ್ಟ್ರೀಯ ವ್ಯಾಜ್ಯ ವಿಲೇವಾರಿ ಮಸೂದೆ'ಯಂತೆ ಕ್ಷಮಾದಾನ ನೀಡಲಾಗಿತ್ತು.ಆದರೆ ಇದನ್ನು ಪಾಕಿಸ್ತಾನ ಸುಪ್ರೀಂ ಕೋರ್ಟಿನ ಇಫ್ತಿಕಾರ್ ಚೌದುರಿ ನೇತೃತ್ವದ 17 ನ್ಯಾಯಮೂರ್ತಿಗಳ ಪೀಠವು ರದ್ದುಗೊಳಿಸಿ, ಪ್ರಕರಣಕ್ಕೆ ಮರು ಜೀವ ನೀಡಿರುವುದು ಸಚಿವರ ವಿರುದ್ಧದ ವಾರೆಂಟ್‌ಗೆ ಕಾರಣವಾಗಿದೆ.

ಆ ನಿಟ್ಟಿನಲ್ಲಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಪಾಕಿಸ್ತಾನ ಅಧ್ಯಕ್ಷ ಜರ್ದಾರಿ ಹಾಗೂ ಇನ್ನಿತರ ಸಚಿವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಒತ್ತಡ ಹೆಚ್ಚುತ್ತಿದೆ. ಮತ್ತೊಂದೆಡೆ ರಾಜಕೀಯ ವಲಯದಲ್ಲಿ ಬಿರುಗಾಳಿ ಬೀಸಿದ್ದು, ಯಾವ ಹಂತಕ್ಕೆ ತಲುಪಲಿದೆ ಎಂಬ ಕುತೂಹಲ ಕೆರಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ