ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಜರ್ದಾರಿಗೆ ಮತ್ಯಾಕೆ ಜೈಲು ಶಿಕ್ಷೆ: ಪಾಕ್ ಪ್ರಧಾನಿ (Zardari | Gilani | Pakistan | supreme court,)
Bookmark and Share Feedback Print
 
PTI
ಪಾಕಿಸ್ತಾನ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ ಅಪರಾಧ ಪ್ರಕರಣವೊಂದರಲ್ಲಿ ಅಪೆಕ್ಸ್ ಕೋರ್ಟ್ ನೀಡಿರುವ ಕ್ಷಮಾದಾನವನ್ನು ಪ್ರಧಾನಿ ಯೂಸೂಫ್ ರಾಜಾ ಗಿಲಾನಿ ಸಮರ್ಥಿಸಿಕೊಂಡಿದ್ದಾರೆ.

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜರ್ದಾರಿ ಈಗಾಗಲೇ 12ವರ್ಷ ಜೈಲಿನಲ್ಲಿ ಕಳೆದಿದ್ದಾರೆ ಎಂದರು. ಹೀಗಾಗಿ ಇದು ಹೊಸ ಪ್ರಕರಣ ಅಲ್ಲ, ಜರ್ದಾರಿ ಸುಮಾರು 4ರಿಂದ 5ಲಕ್ಷ ಕೋಟಿ ರೂಪಾಯಿ ಅವ್ಯವಹಾರದಲ್ಲಿ ಭಾಗಿಯಾಗಿ ಜೈಲು ಶಿಕ್ಷೆ ಅನುಭವಿಸಿದ್ದಾರೆ ಎಂದರು.

ಜರ್ದಾರಿ ಶಿಕ್ಷೆ ಅನುಭವಿಸಿದ ನಂತರ ಕ್ಷಮೆ ಕೋರಿಕೊಂಡ ಹಿನ್ನೆಲೆಯಲ್ಲಿ ಈಗ ಅವರನ್ನು ಪ್ರಕರಣದಿಂದ ದೋಷಮುಕ್ತಗೊಳಿಸಲಾಗಿದೆ ಎಂದರು. ಜರ್ದಾರಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ಕೂಡುವ ಅಗತ್ಯವಿಲ್ಲ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ