ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲಾರೆ: ಜರ್ದಾರಿ (Rehman Mallik | Pak court | arrest warrant | Zardari)
Bookmark and Share Feedback Print
 
PTI
ಬಹುಕೋಟಿ ಹಗರಣದ ಆರೋಪದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಬೇಕು ಎಂಬ ಪ್ರತಿಪಕ್ಷಗಳ ಆಗ್ರಹವನ್ನು ಪಾಕಿಸ್ತಾನ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ ಸಾರಸಗಟಾಗಿ ತಳ್ಳಿಹಾಕಿದ್ದಾರೆ.

ಈ ವಿಷಯ ಕುರಿತಂತೆ ಜರ್ದಾರಿ ಅವರಿಗೆ ಪಾಕಿಸ್ತಾನ ಪೀಪಲ್ಸ್ ಪಕ್ಷದ ನಾಯಕರೂ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ. ಭಾನುವಾರ ನಡೆದ ಸಭೆಯಲ್ಲಿ ಪಕ್ಷದ ನಾಯಕರು ನಿರ್ಧಾರಕ್ಕೆ ಬಂದಿದ್ದು, ಪಕ್ಷದ ಯಾವುದೇ ಕಾರ್ಯಕರ್ತನ ಮೇಲೆ ಆರೋಪವಿದ್ದರೂ ಆತ ನ್ಯಾಯಾಲಯ ನೀಡುವ ಆದೇಶವನ್ನು ಪಾಲಿಸಬೇಕು. ಆದರೆ, ಆರೋಪ ಇದೆ ಎಂಬ ಒಂದೇ ಕಾರಣಕ್ಕೆ ಯಾವುದೇ ಕ್ಯಾಬಿನೆಟ್ ಸಚಿವರನ್ನು ಕೈಬಿಡಲಾಗುವುದಿಲ್ಲ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜಹಾಂಗೀರ್ ಬಾದರ್ ತಿಳಿಸಿದ್ದಾರೆ.

ಜರ್ದಾರಿ ಮತ್ತು ಇತರ 8,000ಕ್ಕೂ ಹೆಚ್ಚು ಮಂದಿಯ ವಿರುದ್ಧ ದಾಖಲಾಗಿದ್ದ ಅಕ್ರಮ ಆಸ್ತಿ ಗಳಿಕೆ ಸೇರಿದಂತೆ ಭ್ರಷ್ಟಾಚಾರ ಪ್ರಕರಣಗಳಿಂದ 'ರಾಷ್ಟ್ರೀಯ ವ್ಯಾಜ್ಯ ವಿಲೇವಾರಿ ಮಸೂದೆ'ಯಂತೆ ಕ್ಷಮಾದಾನ ನೀಡಲಾಗಿತ್ತು. ಆದರೆ ಇದನ್ನು ಪಾಕಿಸ್ತಾನ ಸುಪ್ರೀಂ ಕೋರ್ಟಿನ ಇಫ್ತಿಕಾರ್ ಚೌದುರಿ ನೇತೃತ್ವದ 17 ನ್ಯಾಯಮೂರ್ತಿಗಳ ಪೀಠವು ರದ್ದುಗೊಳಿಸಿ, ಪ್ರಕರಣಕ್ಕೆ ಮರು ಜೀವ ನೀಡಿರುವುದು ಸಚಿವರು ಸೇರಿದಂತೆ ಜರ್ದಾರಿ ಭವಿಷ್ಯ ಮತ್ತೊಮ್ಮೆ ಡೋಲಾಯಮಾನ ಸ್ಥಿತಿಗೆ ಬಂದಂತಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ