ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಕೋಪನ್‌ಹೇಗನ್: ಚೀನಾ ಪ್ರಮುಖ ಪಾತ್ರವಹಿಸಿದೆ-ಯಾಂಗ್ (Barack Obama | Wen Jiabao | India | China | Manmohan Singh)
Bookmark and Share Feedback Print
 
ಜಾಗತಿಕ ಹವಾಮಾನ ವೈಪರೀತ್ಯ ತಡೆ ಕುರಿತಂತೆ ಕೋಪನ್ ಹೇಗನ್‌ನಲ್ಲಿ ಸುಮಾರು 12ದಿನಗಳ ಕಾಲ ನಡೆದ ಶೃಂಗಸಭೆಯಲ್ಲಿ ಧನಾತ್ಮಕ ಫಲಿತಾಂಶ ಹೊರಹೊಮ್ಮುವ ನಿಟ್ಟಿನಲ್ಲಿ ಚೀನಾ ಪ್ರಮುಖ ಪಾತ್ರ ವಹಿಸಿರುವುದಾಗಿ ಚೀನಾ ವಿದೇಶಾಂಗ ಸಚಿವ ಯಾಂಗ್ ಜೆಯೇಚಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಶೃಂಗಸಭೆಯಲ್ಲಿ ನಡೆದ ಮಾತುಕತೆ ಸಂದರ್ಭದಲ್ಲಿ ಚೀನಾ ಎಲ್ಲ ದೇಶಗಳ ನಡುವೆ ಹೊಂದಾಣಿಕೆ ಸಾಧಿಸುವ ಜೊತೆಗೆ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಎಲ್ಲ ರಾಷ್ಟ್ರಗಳ ಪ್ರಮುಖ ನಾಯಕರ ಜೊತೆ ಉತ್ತಮ ಸಹಕಾರ ಬೆಳೆಸಿಕೊಂಡಿದ್ದರು ಎಂದು ತಿಳಿಸಿದ್ದಾರೆ.

ಹವಾಮಾನ ವೈಪರೀತ್ಯ ವಿರುದ್ಧ ಹೋರಾಡಲು ಕೋಪನ್‌ಹೇಗನ್ ಶೃಂಗಸಭೆ ಪ್ರಮುಖ ಅವಕಾಶವನ್ನು ಒದಗಿಸಿಕೊಟ್ಟಿದ್ದಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲೂ ಉತ್ತಮ ಬಾಂಧವ್ಯ ಏರ್ಪಡಿಸಲು ನೆರವಾಗಿದೆ ಎಂದು ಅವರು ವಿವರಿಸಿದ್ದಾರೆ.

ಕೋಪನ್‌ಹೇಗನ್ ಶೃಂಗಸಭೆಯಲ್ಲಿ ಭಾಗವಹಿಸುವ ಮುನ್ನ ಸಭೆಯಲ್ಲಿ ಚರ್ಚಿಸಬೇಕಾದ ವಿಷಯಗಳ ಕುರಿತು ಚೀನಾ ಪ್ರಧಾನಿ ಜಿಯಾಬಾವೋ ಅವರು ಭಾರತದ ಪ್ರಧಾನಿ ಮನಮೋಹನ್ ಸಿಂಗ್ ಅವರ ಜೊತೆ ಚರ್ಚೆ ನಡೆಸಿದ್ದಾರೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ