ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಸರಕಾರ ,ಸೇನೆಯ ಮಧ್ಯೆ ಭಿನ್ನಾಭಿಪ್ರಾಯವಿಲ್ಲ:ಗಿಲಾನಿ (Yousuf Raza Gilani | Army | Pakistan)
Bookmark and Share Feedback Print
 
ಸರಕಾರ ಹಾಗೂ ಸೇನಾಪಡೆಗಳ ಮಧ್ಯೆ ಯಾವುದೇ ರೀತಿಯ ಭಿನ್ನಾಭಿಪ್ರಾಗಳಿಲ್ಲ. ಸಂವಿಧಾನದಡಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಪ್ರಧಾನಮಂತ್ರಿ ಯುಸೂಫ್ ರಾಜಾ ಗಿಲಾನಿ ಹೇಳಿದ್ದಾರೆ.

ದೇಶದ ಗುಪ್ತಚರ ಸಂಸ್ಥೆಯಾದ ಐಎಸ್‌ಐ ಕೂಡಾ ಸರಕಾರದ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಗಿಲಾನಿ ಸ್ಪಷ್ಟಪಡಿಸಿದರು.

ಖಾಸಗಿ ಟಿವಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಗಿಲಾನಿ, ದೇಶದ ಗುಪ್ತಚರ ಸಂಸ್ಥೆಯ ಕಾರ್ಯವೈಖರಿಯಲ್ಲಿ ಸಂಪೂರ್ಣ ವಿಸ್ವಾಸವಿದ್ದು, ಅದನ್ನು ರಾಜಕೀಯಗೊಳಿಸಲು ಬಯಸುವುದಿಲ್ಲ ಎಂದರು.
ಸಂಬಂಧಿತ ಮಾಹಿತಿ ಹುಡುಕಿ