ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಇರಾಕ್: ಬಾಂಬ್ ಸ್ಫೋಟಕ್ಕೆ ಷಿಯಾ ಯಾತ್ರಿಗಳು ಬಲಿ (Iraq | Baghdad Blast | Shiite | bomb | Karbala)
Bookmark and Share Feedback Print
 
ಬಾಗ್ದಾದ್‌ನ ಪೂರ್ವ ಭಾಗದ ರಸ್ತೆ ಸಮೀಪ ಬಾಂಬ್‌ವೊಂದು ಸ್ಫೋಟಗೊಂಡ ಪರಿಣಾಮ 3ಮಂದಿ ಷಿಯಾ ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವುದಾಗಿ ಇರಾಕ್ ಪೊಲೀಸ್ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ರಸ್ತೆ ಸಮೀಪದ ಟೆಂಟ್ ಬಳಿ ಷಿಯಾ ಯಾತ್ರಾರ್ಥಿಗಳು ನೀರು ಮತ್ತು ಆಹಾರವನ್ನು ಖರೀದಿಸುತ್ತಿದ್ದ ಸಂದರ್ಭದಲ್ಲಿ ಪಕ್ಕದಲ್ಲೇ ಅಡಗಿಸಿಟ್ಟ ಬಾಂಬ್ ಸ್ಫೋಟಗೊಂಡ ಘಟನೆ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಾಂಬ್ ಸ್ಫೋಟದಲ್ಲಿ 3ಮಂದಿ ಸಾವನ್ನಪ್ಪಿರುವುದನ್ನು ಆಸ್ಪತ್ರೆಯ ವೈದ್ಯಾಧಿಕಾರಿಗಳು ಖಚಿತಪಡಿಸಿದ್ದಾರೆ. ಆದರೆ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ದಕ್ಷಿಣ ನಗರದ ಷಿಯಾಗಳ ಪವಿತ್ರ ಸ್ಥಳವಾಗಿರುವ ಕರ್ಬಾಲಾಕ್ಕೆ ಸಾವಿರಾರು ಮಂದಿ ಯಾತ್ರಾರ್ಥಿಗಳು ತೆರಳುತ್ತಾರೆ. ಈ ಸಂದರ್ಭದಲ್ಲಿ ಘಟನೆ ಸಂಭವಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ