ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕ್ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬೆದರಿಕೆ ಇಲ್ಲ: ನವಾಜ್ (PML-N | Zardari | Sharif | Pakistan | Islamabad)
Bookmark and Share Feedback Print
 
PTI
ದೇಶದಲ್ಲಿರುವ ಪ್ರಜಾಪ್ರಭುತ್ವ ವ್ಯವಸ್ಥೆಗೆ ಯಾವುದೇ ರೀತಿಯ ಬೆದರಿಕೆ ಒಡ್ಡುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್(ಪಿಎಂಎಲ್-ಎನ್) ವರಿಷ್ಠ ನವಾಜ್ ಷರೀಫ್, ಈ ಕುರಿತು ಪಾಕಿಸ್ತಾನ ಅಧ್ಯಕ್ಷ ಅಸೀಫ್ ಅಲಿ ಜರ್ದಾರಿ ಅವರೊಂದಿಗೆ ಮಾತುಕತೆ ನಡೆಸಲು ತಾವು ಸಿದ್ದ ಎಂದು ಹೇಳಿದ್ದಾರೆ.

ಪಕ್ಷದ ಮುಖಂಡರೊಂದಿಗಿನ ಸಭೆಯ ನಂತರ ಸುದ್ದಿಗಾರರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾತುಕತೆ ಮಾತ್ರ ಫಲಿತಾಂಶದ ಆಧಾರದ ಮೇಲೆ ಕೇಂದ್ರೀಕೃತವಾಗಿದೆ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆ ಕುರಿತಂತೆ ಯಾವುದೇ ಬೆದರಿಕೆ ಇಲ್ಲ ಎಂದಿರುವ ನವಾಜ್, ನಾವು ಪ್ರಜಾಸತ್ತೆ ವ್ಯವಸ್ಥೆ ಹಾಗೂ ಸಂವಿಧಾನವನ್ನು ಬೆಂಬಲಿಸುವುದಾಗಿ ತಿಳಿಸಿದರು.

ಪಾಕಿಸ್ತಾನ್ ಪೀಪಲ್ಸ್ ಪಕ್ಷದ ನೇತೃತ್ವದ ಸರ್ಕಾರವನ್ನು ಯಾಕೆ ಬೆಂಬಲಿಸುತ್ತಿಲ್ಲ ಎಂದು ಷರೀಫ್ ಅವರನ್ನು ಪ್ರಶ್ನಿಸಿದಾಗ,ಪಿಪಿಪಿ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸೂಕ್ತವಾಗಿ ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದ ಅವರು, 17ನೇ ತಿದ್ದುಪಡಿಯನ್ನು ನಾಶಪಡಿಸಿದೆ ಎಂದು ದೂರಿದರು.
ಸಂಬಂಧಿತ ಮಾಹಿತಿ ಹುಡುಕಿ