ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಕರಾಚಿ: ಮೊಹರಂ ಮೆರವಣಿಗೆ-ಬಾಂಬ್ ದಾಳಿಗೆ 15 ಬಲಿ (Muharram | Suicide attack | Karachi | police | Pakistan)
Bookmark and Share Feedback Print
 
ಮೊಹರಂ ದಿನಾಚರಣೆ ಅಂಗವಾಗಿ ಸೋಮವಾರ ಶಿಯಾ ಮುಸ್ಲಿಮರು ಬೃಹತ್ ಮೆರವಣಿಗೆ ಸಾಗುತ್ತಿದ್ದ ವೇಳೆ ಆತ್ಮಹತ್ಯಾ ಬಾಂಬ್ ದಾಳಿ ನಡೆಸಿದ ಪರಿಣಾಮ 15ಮಂದಿ ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿರುವುದಾಗಿ ಮಾಧ್ಯಮ ವರದಿಯೊಂದು ತಿಳಿಸಿದೆ.

ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ಬೃಹತ್ ಮೆರವಣಿಗೆ ಸಾಗುತ್ತಿದ್ದ ವೇಳೆ ಆತ್ಮಹತ್ಯಾ ಬಾಂಬರ್ ತನ್ನನ್ನು ತಾನೇ ಸ್ಫೋಟಿಸಿಕೊಂಡ ಪರಿಣಾಮ ಮೆರವಣಿಗೆಯಲ್ಲಿ ಸಾಗುತ್ತಿದ್ದವರು ಬಲಿಯಾಗಿದ್ದಾರೆ. ಘಟನೆಯಲ್ಲಿ 15ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ವರದಿ ಹೇಳಿದೆ. ಸಾವಿನ ಸಂಖ್ಯೆ ನಿಖರವಾಗಿ ತಿಳಿದು ಬಂದಿಲ್ಲ.

ಭಯೋತ್ಪಾದನಾ ದಾಳಿ ನಡೆಯುವ ಸಾಧ್ಯತೆ ಇದೆ ಎಂಬ ಮುನ್ನೆಚ್ಚರಿಕೆಯಿಂದ ಸಾಕಷ್ಟು ಭದ್ರತೆ ಏರ್ಪಡಿಸಲಾಗಿತ್ತು. ಇಮಾಮ್‌ಗಢ್‌ ಎದುರು ಭಾಗದಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್‌ನಲ್ಲಿ ಪ್ರತಿಯೊಬ್ಬರ ತಪಾಸಣೆ ನಡೆಸಲಾಗುತ್ತಿತ್ತು. ಆತ್ಮಹತ್ಯಾ ಬಾಂಬರ್‌ನ ತಪಾಸಣೆ ನಡೆಸುತ್ತಿದ್ದ ವೇಳೆಯೇ ಆತ ತನ್ನನ್ನು ತಾನೇ ಸ್ಫೋಟಿಸಿಕೊಂಡಿದ್ದ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏಕಾಏಕಿ ಸ್ಫೋಟ ಸಂಭವಿಸಿದ ತಕ್ಷಣವೇ ವಿದ್ಯುತ್ ಸರಬರಾಜು ಬಂದ್ ಆಗಿತ್ತು. ಅಲ್ಲದೇ ಮೆರವಣಿಗೆಯಲ್ಲಿ ಸಾಗುತ್ತಿದ್ದವರು ದಿಗ್ಭ್ರಾಂತರಾಗಿ ದಿಕ್ಕಾಪಾಲಾಗಿ ಓಡ ತೊಡಗಿದ್ದರು ಎಂದು ಡೈಲಿ ಟೈಮ್ಸ್ ವರದಿ ವಿವರಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ