ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಅಫ್ಘಾನ್ ನಾಗರಿಕರ ಹತ್ಯೆ-ಒಬಾಮ ವಿರುದ್ಧ ಆಕ್ರೋಶ (Jalalabad | Afghanistan | Barack Obama | US)
Bookmark and Share Feedback Print
 
ಅಫ್ಘಾನಿಸ್ತಾನದಲ್ಲಿ ಪಾಶ್ಚಾತ್ಯ ದೇಶಗಳ ಮಿಲಿಟರಿ ಪಡೆಗಳು ನಾಗರಿಕರನ್ನು ಹತ್ಯೆಗೈದಿರುವುದನ್ನು ತೀವ್ರವಾಗಿ ಖಂಡಿಸಿ ಬುಧವಾರ ಅಫ್ಘಾನ್ ಬೀದಿಗಳಲ್ಲಿ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರ ಪ್ರತಿಕೃತಿಯನ್ನು ಸುಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೂರಾರು ಯೂನಿರ್ವಸಿಟಿ ವಿದ್ಯಾರ್ಥಿಗಳು ಜಲಾಲ್‌ಬಾದ್‌ನ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಡೆವೊಡ್ಡಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಬರಾಕ್ ಒಬಾಮ ವಿರುದ್ಧ ಘೋಷಣೆಗಳನ್ನು ಕೂಗಿದರು.

ನಂಗಾಹಾರ್ ಪ್ರಾಂತ್ಯದಲ್ಲಿ ಅಮೆರಿಕ ಮಿಲಿಟರಿ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ 8ಕ್ಕೂ ಅಧಿಕ ವಿದ್ಯಾರ್ಥಿಗಳು ಬಲಿಯಾಗಿದ್ದರು. ಈ ಘಟನೆಯನ್ನು ಖಂಡಿಸಿ ಇಂದು ವಿದ್ಯಾರ್ಥಿಗಳು ಅಮೆರಿಕದ ಮಿಲಿಟರಿ ಕಾರ್ಯಾಚರಣೆ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.

ಆ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಈ ಅಮಾನವೀಯ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಬೇಕೆಂದು ಆಗ್ರಹಿಸಿರುವ ವಿದ್ಯಾರ್ಥಿಗಳು ಇಲ್ಲದಿದ್ದರೆ ನಾವು ಪೆನ್ನಿನ ಬದಲು ಗನ್ ಹಿಡಿಯಬೇಕಾಗುತ್ತೆ ಎಂದು ಗಂಭೀರ ಎಚ್ಚರಿಕೆಯನ್ನು ಸಂದೇಶವನ್ನೂ ನೀಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ