ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಭಾರತೀಯ ವಿದ್ಯಾರ್ಥಿ ಹತ್ಯೆಗೆ ಆಸ್ಟ್ರೇಲಿಯಾ ಖಂಡನೆ (Australia | Indian Student | Sydney | Melbourne)
Bookmark and Share Feedback Print
 
ಮೆಲ್ಬೊರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಹತ್ಯೆಗೈದಿರುವ ಕೃತ್ಯವನ್ನು ಆಸ್ಟ್ರೇಲಿಯಾ ಸೋಮವಾರ ತೀವ್ರವಾಗಿ ಖಂಡಿಸಿದ್ದು, ಏತನ್ಮಧ್ಯೆ ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಜನಾಂಗೀಯ ಹಲ್ಲೆ ಮತ್ತು ಹತ್ಯೆಯನ್ನು ಕೂಡಲೇ ನಿಲ್ಲಿಸುವಂತೆ ಭಾರತ ಆಗ್ರಹಿಸಿದೆ.

ಭಾರತೀಯ ಮೂಲದ ಆಸ್ಟ್ರೇಲಿಯಾ ಪ್ರಜೆಯಾಗಿರುವ ನಿತಿನ್ ಗಾರ್ಗ್(21) ಎಂಬ ವಿದ್ಯಾರ್ಥಿಯನ್ನು ಶನಿವಾರ ಚೂರಿಯಿಂದ ಇರಿದು ಕೊಲೆಗೈಯಲಾಗಿತ್ತು. ವಿದ್ಯಾಭ್ಯಾಸದ ಜೊತೆಗೆ ಪಾರ್ಟ್‌ ಟೈಮ್ ಕೆಲಸಕ್ಕೆ ಹೋಗುತ್ತಿದ್ದ ವೇಳೆ ನಿತಿನ್ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು ಚೂರಿಯಿಂದ ಇರಿದಿದ್ದರು, ನಂತರ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಸಾವನ್ನಪ್ಪಿದ್ದ.

ಇದೀಗ ಘಟನೆ ಕುರಿತು ಆಸ್ಟ್ರೇಲಿಯಾ ತೀವ್ರವಾಗಿ ಖಂಡಿಸಿದೆ. ಹತ್ಯೆ ಕುರಿತಂತೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಕೊಲೆಗೈದ ದುಷ್ಕರ್ಮಿಗಳ ಬಗ್ಗೆ ಯಾವುದೇ ಮಾಹಿತಿ ಲಭಿಸಿಲ್ಲ ಎಂದು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ