ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಲಾಸ್ ವೇಗಾಸ್ ಕೋರ್ಟ್‌ನೊಳಗೆ ಶೂಟೌಟ್ (Shootout | Las Vegas | courthouse | Washington)
Bookmark and Share Feedback Print
 
ಲಾಸ್ ವೇಗಾಸ್ ಕೋರ್ಟ್ ಆವರಣದ ಒಳಗಡೆ ಗನ್‌ಮ್ಯಾನ್‌ವೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ ಸರ್ಕಾರಿ ಅಧಿಕಾರಿಯೊಬ್ಬ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.

ಗನ್‌ಮ್ಯಾನ್ ಗುಂಡಿನ ದಾಳಿಗೆ ಭದ್ರತಾ ಪಡೆಯ ವ್ಯಕ್ತಿ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಲಾಸ್ ವೇಗಾಸ್ ಕೋರ್ಟ್‌ನೊಳಗೆ ಇಂದು ಬೆಳಿಗ್ಗೆ ನಡೆದ ಘಟನೆಯಲ್ಲಿ ನ್ಯಾಯಾಲಯದ ಭದ್ರತಾ ಅಧಿಕಾರಿಯಾಗಿದ್ದ ಲಾಯ್ಡ್ ಡಿ ಜಾರ್ಜ್ ಬಲಿಯಾಗಿರುವುದಾಗಿ ಅಮೆರಿಕ ಮಾರ್ಷಲ್ ವಕ್ತಾರ ಜೆಫ್ ಕಾರ್ಟೆರ್ ತಿಳಿಸಿದ್ದಾರೆ.

ಗುಂಡಿನ ದಾಳಿಯಲ್ಲಿ ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶೂಟೌಟ್ ನಡೆಸಿದ ವ್ಯಕ್ತಿ ಯಾರೆಂದು ತಿಳಿದು ಬಂದಿಲ್ಲ ಎಂದು ತಿಳಿಸಿರುವ ಅಧಿಕಾರಿಗಳು, ಆತನ ಬಂಧನಕ್ಕಾಗಿ ಎಲ್ಲೆಡೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ