ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಗಲ್ಫ್ ರಾಷ್ಟ್ರಗಳ ಮೇಲೆ ದಾಳಿಗೆ ಅಲ್ ಖಾಯಿದಾ ಸಂಚು! (al-Qaeda | Gulf States | Kuwait | Gulf | Arabian Sea)
Bookmark and Share Feedback Print
 
ಕಳೆದ ಕೆಲವು ತಿಂಗಳ ಹಿಂದಷ್ಟೇ ಉಗ್ರಗಾಮಿ ಸಂಘಟನೆಗಳು ಪುನರ್ ಸಂಘಟನೆಗೊಂಡಿರುವ ಹಿನ್ನೆಲೆಯಲ್ಲಿ ಇಂಧನ ಹೊಂದಿರುವ ಶ್ರೀಮಂತ ಗಲ್ಫ್ ರಾಷ್ಟ್ರಗಳ ಮೇಲೆ ಅಲ್ ಖಾಯಿದಾ ದಾಳಿ ನಡೆಸುವ ಸಾಧ್ಯತೆ ಇರುವುದಾಗಿ ಪಾಶ್ಚಿಮಾತ್ಯ ಗುಪ್ತಚರ ಇಲಾಖೆ ಮುನ್ನೆಚ್ಚರಿಕೆ ನೀಡಿರುವುದಾಗಿ ಅಲ್ ಕ್ವಿಬಾಸ್ ದೈನಿಕದ ವರದಿ ತಿಳಿಸಿದೆ.

ಹೆಸರು ಹೇಳಲಿಚ್ಚಿಸದ ಕುವೈಟ್ ಭದ್ರತಾ ಅಧಿಕಾರಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಪ್ರಕಟಿಸಿರುವ ದೈನಿಕ, ಗಲ್ಫ್ ಮತ್ತು ಅರೇಬಿಯನ್ ಸಮುದ್ರ ಪ್ರದೇಶದಲ್ಲಿ ಪ್ರಯಾಣಿಕರ ಹಾಗೂ ವಾಣಿಜ್ಯ ಹಡಗುಗಳ ಮೇಲೆ ದಾಳಿ ನಡೆಸುವ ಸಲುವಾಗಿಯೇ ಅಲ್ ಖಾಯಿದಾ ಉಗ್ರರಿಗೆ ತರಬೇತಿ ನೀಡಿರುವುದಾಗಿಯೂ ತಿಳಿಸಿದೆ.

ಆ ನಿಟ್ಟಿನಲ್ಲಿ ಗಲ್ಫ್ ರಾಷ್ಟ್ರಗಳು ಸಂಭಾವ್ಯ ದಾಳಿಯನ್ನು ತಡೆಯುವ ನಿಟ್ಟಿನಲ್ಲಿ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸಬೇಕೆಂದು ಪಾಶ್ಚಿಮಾತ್ಯ ಗುಪ್ತಚರ ಇಲಾಖೆಯ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಮುಖ್ಯವಾಗಿ ತೈಲ ಮತ್ತು ಗ್ಯಾಸ್ ಟ್ಯಾಂಕರ್ ಹಡಗುಗಳಿಗೆ ಬಿಗಿ ಭದ್ರತೆ ಒದಗಿಸಬೇಕಾಗಿದೆ ಎಂದು ವಿವರಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ