ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಆಸೀಸ್ ನಂತ್ರ,ಲಂಡನ್‌‌ನಲ್ಲೂ ಭಾರತೀಯನಿಗೆ ಇರಿತ (London | Australia | Sikh | New delhi)
Bookmark and Share Feedback Print
 
ಭಾರತೀಯ ಮೂಲದ ಸಿಕ್ ವ್ಯಕ್ತಿಯನ್ನು ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಗಾಯಗೊಳಿಸಿ ಕೊಲೆ ಮಾಡಿರುವ ಘಟನೆ ಪೂರ್ವ ಲಂಡನ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ರಾತ್ರಿ 7ಗಂಟೆ ಸಮಯದಲ್ಲಿ ಇಬ್ಬರು ದುಷ್ಕರ್ಮಿಗಳು ಸಿಕ್ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಗಾಯಗೊಳಿಸಿ ಪರಾರಿಯಾದರು. ಗಾಯಗೊಂಡ ಆತನನ್ನು ರಾಯಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ವಿವರಿಸಿದ್ದಾರೆ.

ಸುಕ್‌ವಿಂದರ್ ಸಿಂಗ್(31) ಕೊಲೆಯಾದ ವ್ಯಕ್ತಿ. ಈತ ಕಳೆದ 10ವರ್ಷಗಳಿಂದ ಬ್ರಿಟನ್‌ನಲ್ಲಿ ವಾಸಿಸುತ್ತಿದ್ದ. ಆಸ್ಟ್ರೇಲಿಯಾದಲ್ಲಿ ಭಾರತೀಯರ ಮೇಲೆ ಜನಾಂಗೀಯ ಹಲ್ಲೆ, ಹತ್ಯೆ ನಡೆಯುತ್ತಿರುವ ಆತಂಕದ ನಡುವೆಯೇ, ಲಂಡನ್‌ನಲ್ಲಿಯೂ ಭಾರತೀಯನಿಗೆ ಚೂರಿ ಇರಿದ ಘಟನೆ ನಡೆದಿದೆ ಮತ್ತಷ್ಟು ಕಳವಳಕ್ಕೆ ಕಾರಣವಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ