ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಅಮೆರಿಕ ದಾಳಿಗೆ ಪಾಕ್‌ನ 10 ಉಗ್ರರು ಬಲಿ (US | Pak | missile strike)
Bookmark and Share Feedback Print
 
ಉಗ್ರರ ತರಬೇತಿ ಶಿಬಿರದ ಮೇಲೆ ಅಮೆರಿಕ ನಡೆಸಿದ ಕ್ಷಿಪಣಿ ದಾಳಿಗೆ ಕನಿಷ್ಟ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಪ್ರಸಕ್ತ ತಿಂಗಳ ಅವಧಿಯಲ್ಲಿ ಪಾಕಿಸ್ತಾನದಲ್ಲಿರುವ ಉಗ್ರರ ತರಬೇತಿ ಶಿಬಿರಗಳ ಮೇಲೆ ಅಮೆರಿಕ ಏಳನೇ ಬಾರಿಗೆ ದಾಳಿ ನಡೆಸಿದೆ. ಅಮೆರಿಕದ ಕ್ಷಿಪಣಿ ದಾಳಿಯನ್ನು ಪಾಕಿಸ್ತಾನ ವ್ಯಾಪಕವಾಗಿ ಖಂಡಿಸಿದೆ.

ಅಫ್ಘಾನಿಸ್ತಾನದ ಗಡಿಯಲ್ಲಿ ತಾಲಿಬಾನಿಗಳ ವಿರುದ್ಧ ನ್ಯಾಟೋ ಪಡೆಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡುವುದು ಅಗತ್ಯವಾಗಿದೆ. ಪಾಕಿಸ್ತಾನ ಕೂಡಾ ಉಗ್ರರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅಮೆರಿಕದ ಅಧಿಕಾರಿಗಳು ಒತ್ತಾಯಿಸಿದ್ದಾರೆ.

ಉತ್ತರ ವಜೀರಿಸ್ತಾನದ ಪಾಸಲ್‌ಕೋಟ್‌ ಗ್ರಾಮದಲ್ಲಿ ಉಗ್ರರು ತರಬೇತಿ ಶಿಬಿರಗಳನ್ನು ನಡೆಸುತ್ತಿರುವ ಮಾಹಿತಿ ಸಂಗ್ರಹಿಸಿದ ನಂತರ ಅಮೆರಿಕ ವೈಮಾನಿಕ ದಾಳಿ ನಡೆಸಿದೆ ಎಂದು ಸೇನಾವಕ್ತಾರರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ