ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಅಮೆರಿಕ ಕ್ಷಿಪಣಿ ದಾಳಿಗೆ 12 ಉಗ್ರರ ಬಲಿ (US drone attack | North Waziristan | Pakistan)
Bookmark and Share Feedback Print
 
ಪಾಕಿಸ್ತಾನದ ಉತ್ತರ ವಜೀರಿಸ್ತಾನ್‌ದ ಬುಡಕಟ್ಟು ಪ್ರದೇಶದ ಉಗ್ರರ ತಾಣಗಳ ಮೇಲೆ ಅಮೆರಿಕದ ಸೇನಾಪಡೆಗಳು ದ್ರೋಣ್ ಕ್ಷಿಪಣಿ ದಾಳಿಗೆ 12 ಉಗ್ರರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಉತ್ತರ ವಜೀರಿಸ್ತಾನದ ಶಾಕ‌ಟೊಯಿ ಪ್ರದೇಶದ ಮೇಲೆ ಅಮೆರಿಕ ಕ್ಷಿಪಣಿ ದಾಳಿ ನಡೆಸಿದೆ ಎಂದು ಟಿವಿ ಚಾನೆಲ್‌ಗಳು ವರದಿ ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ 15 ದಿನಗಳಲ್ಲಿ ಅಮೆರಿಕ 10 ಬಾರಿ ಕ್ಷಿಪಣಿ ದಾಳಿ ನಡೆಸಿ, ಹಲವಾರು ಉಗ್ರಗಾಮಿಗಳನ್ನು ಹತ್ಯೆಗೈದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಅಮೆರಿಕ ದಾಳಿಯಲ್ಲಿ ಹತನಾಗಿದ್ದಾನೆ ಎಂದು ಭಾವಿಸಲಾದ ಪಾಕ್‌ನ ತಾಲಿಬಾನ್ ಮುಖ್ಯಸ್ಥ ಮೆಹಸೂದ್,ಆಡಿಯೋ ಸಂದೇಶದ ಮೂಲಕ ತಾವು ಜೀವಂತವಾಗಿರುವುದಾಗಿ ಹೇಳಿಕೆ ನೀಡಿದ್ದು, ಅಮೆರಿಕ ದಾಳಿಗೆ ಪ್ರತಿ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ