ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಭಾರತಕ್ಕೆ ಅಮೆರಿಕ ರಕ್ಷಣಾ ಕಾರ್ಯದರ್ಶಿ ಗೇಟ್ಸ್ ಭೇಟಿ (Obama | Robert Gates | Manmohan Singh | Antony | US)
Bookmark and Share Feedback Print
 
ದೇಶೀಯ ಮಟ್ಟದಲ್ಲಿ ಭದ್ರತೆ ಸ್ಥಿತಿಗತಿ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಅಮೆರಿಕ ರಕ್ಷಣಾ ಕಾರ್ಯದರ್ಶಿ ರೋಬರ್ಟ್ ಗೇಟ್ಸ್ ಮಂಗಳವಾರ ಭಾರತಕ್ಕೆ ಭೇಟಿ ನೀಡಲಿದ್ದಾರೆ.

ಜನವರಿ 19ರಿಂದ 21ರವರೆಗೆ ಭಾರತ ಪ್ರವಾಸ ಕೈಗೊಳ್ಳಲಿರುವ ಗೇಟ್ಸ್, ಪ್ರಧಾನಿ ಮನಮೋಹನ್ ಸಿಂಗ್, ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಹಾಗೂ ರಕ್ಷಣಾ ಸಚಿವ ಎ.ಕೆ.ಆಂಟನಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ.

ಅಮೆರಿಕ ಮತ್ತು ಭಾರತ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ನೆಲೆಯಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸುವ ಸಲುವಾಗಿ ಗೇಟ್ಸ್ ಭಾರತಕ್ಕೆ ಭೇಟಿ ನೀಡುತ್ತಿರುವುದಾಗಿ ಅಮೆರಿಕ ರಕ್ಷಣಾ ಇಲಾಖೆಯ ವಕ್ತಾರ ಮೇಜರ್ ಮೌರೇನ್ ಶುಮುನ್ನ್ ತಿಳಿಸಿದ್ದಾರೆ.

ಪ್ರಸ್ತುತ ಸ್ಥಿತಿಗತಿ, ವ್ಯಾಪಾರ ಮತ್ತು ಸಹಕಾರ ಕುರಿತು ಮುಖ್ಯವಾಗಿ ಚರ್ಚಿಸಲಿದ್ದು, ಏತನ್ಮಧ್ಯೆ ದೇಶೀಯ ರಕ್ಷಣಾ ವ್ಯವಸ್ಥೆಯ ಬಗ್ಗೆಯೂ ಮಾತುಕತೆ ನಡೆಸುವುದಾಗಿ ಗೇಟ್ಸ್ ವಿವರಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ