ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » 60 ತಾಲಿಬಾನ್ ಉಗ್ರರನ್ನು ಕೊಂದು ಹಾಕಿದ ಪಾಕಿಸ್ತಾನ (militants | soldiers | Pakistani security forces | Damadola)
Bookmark and Share Feedback Print
 
ಅಫಘಾನಿಸ್ತಾನ ಗಡಿಭಾಗದ ತಾಲಿಬಾನ್ ಪ್ರಾಬಲ್ಯವಿರುವ ಬುಡಕಟ್ಟು ಪ್ರದೇಶದಲ್ಲಿ ಪಾಕಿಸ್ತಾನ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಗೆ 60 ಭಯೋತ್ಪಾದಕರನ್ನು ಕೊಂದು ಹಾಕಲಾಗಿದ್ದು, ಏಳು ಮಂದಿ ಸೈನಿಕರೂ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಜಾವುರ್ ಬುಡಕಟ್ಟು ಪ್ರಾಂತ್ಯದ ಅಶಾಂತ ಪ್ರದೇಶ ದಾಮದೋಲಾ ಎಂಬಲ್ಲಿ ತಾಲಿಬಾನ್ ಭಯೋತ್ಪಾದಕ ಚಟುವಟಿಕೆಗಳಿಗೆ ಮೂಲ ನೆಲೆಯನ್ನಾಗಿ ಮಾಡಿಕೊಂಡು ಪ್ರಾಬಲ್ಯ ಸ್ಥಾಪಿಸಿತ್ತು. ಆದರೆ ಇದೀಗ ಭದ್ರತಾ ಪಡೆಗಳು ಅವರನ್ನು ಹೊಡೆದೋಡಿಸಿವೆ ಎಂದು ಭದ್ರತಾ ಪಡೆಗಳ ಮುಖ್ಯಸ್ಥರೊಬ್ಬರು ಶನಿವಾರ ತಿಳಿಸಿದ್ದಾರೆ.

ಲಷ್ಕರ್ ಎಂದು ಕರೆಯಲಾಗುವ ಬುಡಕಟ್ಟು ಜನರ ಉಗ್ರ ವಿರೋಧಿ ಗುಂಪಿನೊಂದಿಗೆ ಸೇರಿಕೊಂಡ ಭದ್ರತಾ ಪಡೆಗಳು ಜನವರಿ 27ರಿಂದ ಈ ಪ್ರದೇಶವನ್ನು ಭಯೋತ್ಪಾದಕರಿಂದ ಮುಕ್ತಗೊಳಿಸಬೇಕೆಂದು ಕಾರ್ಯಾಚರಣೆ ಆರಂಭಿಸಿದ್ದವು.

ಈ ಸಂದರ್ಭದಲ್ಲಿ 60ಕ್ಕೂ ಹೆಚ್ಚು ಭಯೋತ್ಪಾದಕರನ್ನು ಕೊಂದು ಹಾಕಲಾಗಿದೆ. ಕಾರ್ಯಾಚರಣೆಯಲ್ಲಿ ಏಳು ಮಂದಿ ಭದ್ರತಾ ಪಡೆಯ ಸಿಬ್ಬಂದಿಗಳು ಕೂಡ ಕೊಲ್ಲಲ್ಪಟ್ಟಿದ್ದಾರೆ. ಇಲ್ಲಿದ್ದ ಹಲವು ಉಗ್ರರ ಅಡಗುತಾಣಗಳನ್ನು ನಾಶಪಡಿಸಲಾಗಿದೆ ಎಂದು ಭದ್ರತಾ ಪಡೆಗಳ ವಕ್ತಾರರು ತಿಳಿಸಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಅಮೆರಿಕಾದಿಂದ ಸಾಕಷ್ಟು ಡ್ರೋನ್ ದಾಳಿಗಳನ್ನೆದುರಿಸಿದ ಈ ಪ್ರದೇಶದಲ್ಲಿ ಉಗ್ರರಿಗಾಗಿ ಇನ್ನೂ ಹುಡುಕಾಟ ನಡೆಸಲಾಗುತ್ತಿದ್ದು, ಕಾರ್ಯಾಚರಣೆ ಮುಂದುವರಿಯುತ್ತಿದೆ ಎಂದು ಅವರು ವಿವರಣೆ ನೀಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ