ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಭಾರತ ಜತೆ ಬಾಂಧವ್ಯಕ್ಕೆ ಆದ್ಯತೆ: ನ್ಯೂಜಿಲ್ಯಾಂಡ್ (India | Newzeland | Rahul gandhi | AICC)
Bookmark and Share Feedback Print
 
ನ್ಯೂಜಿಲ್ಯಾಂಡ್ ಭಾರತದ ಜೊತೆ ಬಾಂಧವ್ಯ ಬೆಳೆಸಲು ಮೊದಲ ಆದ್ಯತೆ ನೀಡಲಿದೆ ಎಂದು ಮಂಗಳವಾರ ಪ್ರಧಾನಿ ಜಾನ್ ಕೀ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸರ್ ಎಡ್ಮಂಡ್ ಹಿಲರಿ ಪ್ರತಿಷ್ಠಾನದ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲು ನ್ಯೂಜಿಲ್ಯಾಂಡ್‌ಗೆ ಆಗಮಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರನ್ನು ಮಂಗಳವಾರ ಅಲ್ಲಿನ ಪ್ರಧಾನಿ ಜಾನ್ ಕೀ ಅವರು ಬರಮಾಡಿಕೊಂಡು ಮಾತನಾಡಿದರು.

ಎರಡು ದೇಶಗಳ ನಡುವೆ ಮುಕ್ತ ವ್ಯಾಪಾರ ಒಪ್ಪಂದ, ಪಶ ಸಂಗೋಪನೆ, ಪ್ರವಾಸೋದ್ಯಮ ಅಭಿವೃದ್ಧಿ ಇತ್ಯಾದಿ ವಿಚಾರಗಳಿಗೆ ಸಂಬಂಧಿಸಿದಂತೆ ರಾಹುಲ್ ಅವರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಕೀ ಈ ಸಂದರ್ಭದಲ್ಲಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ