ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕಿಸ್ತಾನ: ಅವಳಿ ಬಾಂಬ್ ಸ್ಫೋಟಕ್ಕೆ 20ಬಲಿ (Lashkar e-Islam | Pakistan | Khyber blast | Militant base)
Bookmark and Share Feedback Print
 
ಪಾಕಿಸ್ತಾನದ ವಾಯುವ್ಯ ಪ್ರದೇಶದಲ್ಲಿ ಅವಳಿ ಬಾಂಬ್ ಸ್ಫೋಟಗೊಂಡ ಪರಿಣಾಮ 20ಮಂದಿ ಬಲಿಯಾಗಿದ್ದು, 50ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.

ಅಮೆರಿಕದ ವಿಶೇಷ ಪ್ರತಿನಿಧಿ ರಿಚರ್ಡ್ ಹಾಲ್‌ಬ್ರೂಕ್ ಅವರು ಗುರುವಾರ ಪಾಕಿಸ್ತಾನ್ ಪ್ರಧಾನಿ ಯೂಸೂಫ್ ರಾಜಾ ಗಿಲಾನಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿಯೇ, ಬುಡಕಟ್ಟು ಪ್ರದೇಶದ ಕ್ಯಾಟಲ್ ಮಾರ್ಕೆಟ್‌ನಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ.

ಓರ್ಕಾಜೈನ ದಾರ್ಮೆಲಾ ಪ್ರದೇಶದಲ್ಲಿ ಸಂಭವಿಸಿದ ಸ್ಫೋಟದಲ್ಲಿ 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಮತ್ತಷ್ಟು ಬಾಂಬ್‌ ಅಥವಾ ಆತ್ಮಹತ್ಯಾ ದಾಳಿಕೋರರು ಇದ್ದಿರಬಹುದೇ ಎಂಬ ಬಗ್ಗೆ ತೀವ್ರ ಶೋಧ ಕಾರ್ಯ ನಡೆಸುತ್ತಿರುವುದಾಗಿ ಸ್ಥಳೀಯ ಅಧಿಕಾರಿ ಲಿಯಾಖತ್ ಖಾನ್ ತಿಳಿಸಿದ್ದಾರೆ.

ಅವಳಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ 20ಮಂದಿ ಸಾವನ್ನಪ್ಪಿರುವ ಸಾಧ್ಯತೆ ಇರುವುದಾಗಿ ತಿಳಿಸಿರುವ ಅಧಿಕಾರಿಗಳು, ಸಾವು-ನೋವಿನ ಬಗ್ಗೆ ಇನ್ನಷ್ಟೇ ಅಧಿಕೃತವಾಗಿ ತಿಳಿಯಬೇಕಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ