ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಉಭಯ ದೇಶಗಳಿಂದ ಬಿಕ್ಕಟ್ಟು ಪರಿಹಾರ ಸಾಧ್ಯ:ಕ್ಲಿಂಟನ್ (India | Pakistan | Hillary Clinton | Differences | Resolve)
Bookmark and Share Feedback Print
 
ದೇಶಗಳ ನಡುವಣ ಭಿನ್ನಾಭಿಪ್ರಾಯಗಳನ್ನು ಪರಸ್ಪರರಿಂದ ಮಾತ್ರ ಬಗೆಹರಿಸಲು ಸಾಧ್ಯ ಎಂದು ಭಾರತ ಮತ್ತು ಪಾಕಿಸ್ತಾನಕ್ಕೆ ಅರಿವಾಗಿದೆ. ಉಭಯ ದೇಶಗಳ ಸೌಹಾರ್ದತೆಗೆ ಅಮೆರಿಕ ಪ್ರೋತ್ಸಾಹ ನೀಡಲಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಹಿಲೆರಿ ಕ್ಲಿಂಟನ್ ಹೇಳಿದ್ದಾರೆ.

ಹಲವಾರು ಮಹತ್ವದ ಸಂಗತಿಗಳ ಇತ್ಯರ್ಥಕ್ಕೆ ಪರಸ್ಪರರಿಂದ ಮಾತ್ರ ಸಾಧ್ಯ ಎನ್ನುವ ನಿರ್ಧಾರ ಉಭಯ ದೇಶಗಳಿಗೆ ತಿಳಿದಿರಬಹುದು ಎಂದು ನಾನು ಭಾವಿಸಿದ್ದೇನೆ.ಅಮೆರಿಕ ಕೂಡಾ ಉಭಯ ದೇಶಗಳ ಮಾತುಕತೆಗೆ ಉತ್ತೇಜನ ನೀಡಲಿದೆ ಎಂದು ಕ್ಲಿಂಟನ್ ಹೇಳಿದ್ದಾರೆ.

ಅಮೆರಿಕದ ಸಂಸದೀಯ ಸಭೆಯಲ್ಲಿ ವಿದೇಶಾಂಗ ವ್ಯವಹಾರ ಇಲಾಖೆಯ ಅದಿಕಾರಿಗಳೊಂದಿಗೆ ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕ್ಲಿಂಟನ್, ಭಾರತ ಮತ್ತು ಪಾಕಿಸ್ತಾನ ಮಧ್ಯದ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಪಾಕಿಸ್ತಾನದ ಪರಮಾಣು ಘಟಕಗಳನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಳ್ಳುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಅಮೆರಿಕ ಸಂಸದರು, ಭಾರತ ಉಗ್ರರ ದಾಳಿಯನ್ನು ಎದುರಿಸಲು ಸಜ್ಜಾಗುತ್ತಿರುವುದು ಘರ್ಷಣೆಗೆ ಕಾರಣವಾಗಬಹುದು ಎಂದು ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ