ಅಮೆರಿಕದಲ್ಲಿ ಇಂಜಿನಿಯರ್ ಹುದ್ದೆಯಲ್ಲಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಪುತ್ರ ಸಾಜೀಬ್ ವಝೆದ್ ಜೊಯ್, ರಾಜಕೀಯ ಸೇರಲಿದ್ದು, ಅವಾಮಿ ಲೀಗ್ ಪಕ್ಷದ ಪ್ರಥಮಿಕ ಸದಸ್ಯತ್ವವನ್ನು ಪಡೆದಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ರಂಗ್‌ಪುರ್ ಘಟಕದಿಂದ ಪ್ರಾಥಮಿಕ ಸದಸ್ಯತ್ವದ ಅರ್ಜಿಯನ್ನು, ಸಾಜೀಬ್ ವಝೆದ್ ಜೊಯ್ ಅವರಿಗೆ ನೀಡಲಾಗಿದೆ ಎಂದು ಪಕ್ಷದ ಜಂಟಿ ಪ್ರಧಾನ ಕಾರ್ಯದರ್ಶಿ ಮಾಹಬುಬೂಲ್ ಅಲಾಮ್ ಹನೀಫ್ ಹೇಳಿದ್ದಾರೆ.
ಅಮೆರಿಕದಲ್ಲಿ ಕಂಪ್ಯೂಟರ್ ಇಂಜಿನಿಯರ್ ಹುದ್ದೆಯಲ್ಲಿರುವ ಜೊಯ್, ರಾಜಕೀಯಕ್ಕೆ ಪಾದಾರ್ಪಣೆ ಮಾಡಿದಂತಾಗಿದೆ ಎಂದು ಸಭೆಯ ನಂತರ ಹನೀಫ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಪಕ್ಷದ ಕೇಂದ್ರ ಕಾರ್ಯಕಾರಿ ಸಮಿತಿಯಲ್ಲಿ ಜಂಟಿ ಪ್ರದಾನ ಕಾರ್ಯದರ್ಶಿ ಹುದ್ದೆ ಖಾಲಿಯಿರುವುದರಿಂದ, ಆ ಸ್ಥಾನಕ್ಕೆ ಪ್ರಧಾನಿ ಪುತ್ರನನ್ನು ನೇಮಕ ಮಾಡುವ ಸಾಧ್ಯತೆಗಳಿವೆ ಎಂದು ಪಕ್ಷದ ಅನಾಮಧೇಯ ಮೂಲಗಳು ತಿಳಿಸಿವೆ.
ಉನ್ನತ ಶಿಕ್ಷಣ ಪಡೆದ ವ್ಯಕ್ತಿಗಳು ಮುಂದೆ ಬಂದು ದೇಶದ ಚುಕ್ಕಾಣಿ ಹಿಡಿಯಬೇಕಾಗಿದೆ.ಹಸೀನಾ ಅವರ ಹಿರಿಯ ಪುತ್ರ ತಾರೀಖ್ ಜಿಯಾ ಎದುರಾಳಿ ಪಕ್ಷವಾದ ಬಾಂಗ್ಲಾದೇಶದ ನ್ಯಾಷನಲಿಸ್ಟ್ ಪಾರ್ಟಿಗೆ ಕೆಲ ವರ್ಷಗಳ ಹಿಂದೆ ಸೇರ್ಪಡೆಯಾಗಿದ್ದಾರೆ ಎಂದು ಹನೀಫ್ ಹೇಳಿದ್ದಾರೆ.
ತಾರೀಖ್ ಇದೀಗ ಲಂಡನ್‌ನಲ್ಲಿ ವಾಸಿಸುತ್ತಿದ್ದು, ಕಳೆದ ಕೇಂದ್ರ ಕಾರ್ಯಕಾರಿ ಸಭೆಯಲ್ಲಿ ಪಕ್ಷದ ಹಿರಿಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.