ಅಫ್ಘಾನಿಸ್ತಾನದಲ್ಲಿರುವ 4ಸಾವಿರ ಭಾರತೀಯರ ರಕ್ಷಣೆಗೆ ಸಂಬಂಧಿಸಿದಂತೆ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಶಿವ ಶಂಕರ್ ಮೆನನ್ ಎರಡು ದಿನಗಳ ಕಾಲ ಭೇಟಿಗಾಗಿ ಶುಕ್ರವಾರ ಅಫ್ಘಾನಿಸ್ತಾನಕ್ಕೆ ಭೇಟಿ ನೀಡಿದ್ದಾರೆ.
ಭಾರತೀಯರಿಗೆ ಸೂಕ್ತ ರಕ್ಷಣೆ ನೀಡುವಂತೆ ಚರ್ಚಿಸುವ ನಿಟ್ಟಿನಲ್ಲಿ ಶುಕ್ರವಾರ ಮೆನನ್ ಕಾಬೂಲ್‌ಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಭಾರತೀಯ ರಾಯಭಾರಿ ಜಯಂತ್ ಪ್ರಸಾದ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಅಫ್ಘಾನಿಸ್ತಾನದ ವಿವಿಧ ಕಂಪನಿಗಳಲ್ಲಿ ಸುಮಾರು 4ಸಾವಿರ ಭಾರತೀಯರು ಕಾರ್ಯನಿರ್ವಹಿಸುತ್ತಿದ್ದು, ಆ ನಿಟ್ಟಿನಲ್ಲಿ ಅವರ ಭದ್ರತೆ ಮತ್ತು ರಕ್ಷಣೆ ಕುರಿತಂತೆ ಅಫ್ಘಾನ್ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಅಲ್ಲದೇ, ಭಾರತೀಯರಿಗೆ ಸೂಕ್ತ ರಕ್ಷಣೆ ನೀಡುವಂತೆ ತಿಳಿಸಿದರು.
ಅಲ್ಲದೇ ಈ ಸಂದರ್ಭದಲ್ಲಿ ಅವರು ಅಫ್ಘಾನ್ ಅಧ್ಯಕ್ಷ ಹಮೀದ್ ಕರ್ಜೈಯ್ ಅವರನ್ನೂ ಕೂಡ ಭೇಟಿಯಾಗಲಿದ್ದಾರೆ. ಕಳೆದ ವಾರ ಕಾಬೂಲ್‌ನಲ್ಲಿ ಆತ್ಮಹತ್ಯಾ ದಾಳಿಯಲ್ಲಿ ಆರು ಮಂದಿ ಭಾರತೀಯರು ಸಾವನ್ನಪ್ಪಿದ ಘಟನೆ ನಂತರ, ಅಫ್ಘಾನಿಸ್ತಾನದಲ್ಲಿನ ಭಾರತೀಯರ ರಕ್ಷಣೆ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸುವಂತೆ ಭಾರತ ಕೋರಿತ್ತು.