ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಲಾಹೋರ್: ಪ್ರಬಲ ಅವಳಿ ಬಾಂಬ್ ಸ್ಫೋಟಕ್ಕೆ 39 ಬಲಿ (Pakistan | Lahore blasts | Police | suicide bomber)
Bookmark and Share Feedback Print
 
ಪಾಕಿಸ್ತಾನದ ಕೇಂದ್ರ ನಗರವಾದ ಲಾಹೋರ್‌ನಲ್ಲಿ ಶುಕ್ರವಾರ ಪ್ರಬಲ ಅವಳಿ ಬಾಂಬ್ ಸ್ಫೋಟದಿಂದಾಗಿ 39 ಮಂದಿ ಬಲಿಯಾಗಿದ್ದು, 35ಜನರು ಗಾಯಗೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಲಾಹೋರ್‌ನ ಪೂರ್ವ ಪಾಕಿಸ್ತಾನ ಭಾಗದಲ್ಲಿ ಮಿಲಿಟರಿ ವಾಹನವನ್ನು ಗುರಿಯಾಗಿರಿಸಿಕೊಂಡು ನಡೆಸಿದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಕನಿಷ್ಠ 25ಮಂದಿ ಗಾಯಗೊಂಡಿರುವುದಾಗಿ ವಿವರಿಸಿದ್ದಾರೆ. ಘಟನೆಯಲ್ಲಿ ಹಲವು ಸೈನಿಕರು ಗಾಯಗೊಂಡಿರುವುದಾಗಿ ಪೊಲೀಸ್ ಅಧಿಕಾರಿ ಮೊಹಮ್ಮದ್ ರಿಯಾಜ್ ಹೇಳಿದ್ದಾರೆ.

ನಂತರ ಆರ್.ಎ.ಬಜಾರ್ ಸಮೀಪ ಬಾಂಬ್ ಸ್ಫೋಟಿಸಿದ್ದು, ಸುಮಾರು 39ಮಂದಿ ಸಾವನ್ನಪ್ಪಿದ್ದು, ಹತ್ತು ಜನರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶುಕ್ರವಾರದ ಪ್ರಾರ್ಥನೆಯ ಸಂದರ್ಭದಲ್ಲಿ ಈ ಬಾಂಬ್ ಸ್ಫೋಟ ಸಂಭವಿಸಿದ್ದರಿಂದ ಸಾವು-ನೋವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇರುವುದಾಗಿ ರಿಯಾಜ್ ಹೇಳಿದ್ದಾರೆ. ಸ್ಫೋಟದ ಹೊಣೆಯನ್ನು ಈವರೆಗೆ ಯಾವುದೇ ಉಗ್ರಗಾಮಿ ಸಂಘಟನೆಗಳು ಹೊತ್ತುಕೊಂಡಿಲ್ಲ.
ಸಂಬಂಧಿತ ಮಾಹಿತಿ ಹುಡುಕಿ