ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕ್‌: ಉಗ್ರರ ಅಟ್ಟಹಾಸ-ಬಾಂಬ್ ಸ್ಫೋಟಕ್ಕೆ 10 ಬಲಿ (Suicide attack | Swat valley | Pakistan | Lahore)
Bookmark and Share Feedback Print
 
ಪಾಕಿಸ್ತಾನದ ಲಾಹೋರ್‌ನಲ್ಲಿ ಶುಕ್ರವಾರ ಸರಣಿ ಬಾಂಬ್ ಸ್ಫೋಟದ ಅಟ್ಟಹಾಸದ ತನ್ಮಧ್ಯೆ ಶನಿವಾರ ಮತ್ತೆ ಸ್ವಾತ್ ಕಣಿವೆಯಲ್ಲಿ ಉಗ್ರರು ನಡೆಸಿದ ಆತ್ಮಹತ್ಯಾ ಬಾಂಬ್ ದಾಳಿಗೆ 10ಮಂದಿ ಬಲಿಯಾಗಿದ್ದು, 13ಜನರು ಗಾಯಗೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಲಾಹೋರ್‌ನಲ್ಲಿ ನಿನ್ನೆ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 45ಮಂದಿ ಸಾವನ್ನಪ್ಪಿದ್ದರು. ಶನಿವಾರ ಬೆಳಿಗ್ಗೆ ಸ್ವಾತ್ ಜಿಲ್ಲೆಯ ಪ್ರಮುಖ ನಗರವಾದ ಮಿಂಗೋರಾ ಚೆಕ್ ಪೋಸ್ಟ್ ಸಮೀಪ ಆತ್ಮಹತ್ಯಾ ಬಾಂಬ್ ದಾಳಿ ನಡೆಸಿರುವುದಾಗಿ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗಳು ಸೇರಿದಂತೆ ಹತ್ತು ಮಂದಿ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿರುವುದಾಗಿ ಖಾಸಗಿ ಟಿವಿ ಚಾನೆಲ್‌ವೊಂದರ ವರದಿ ವಿವರಿಸಿದೆ. ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಐದು ಕಾರುಗಳು ಸಂಪೂರ್ಣ ಭಸ್ಮಗೊಂಡಿದೆ.

ಪ್ರಬಲ ಸ್ಫೋಟದ ವಿಷಯ ತಿಳಿಯುತ್ತಿದ್ದಂತೆಯೇ ಆತಂಕಗೊಂಡ ಅಂಗಡಿ, ಹೋಟೆಲ್‌ಗಳು ಬಂದ್ ಆಗಿರುವುದಾಗಿ ವರದಿ ಹೇಳಿದೆ. ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ