ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ರಷ್ಯಾದಲ್ಲಿ ಪ್ರಜಾಪ್ರಭುತ್ವ ಇದ್ದೂ ಇಲ್ಲದಂತಾಗಿದೆ: ಗೋರ್ಬಚೆವ್ (democracy | Gorbachev | Russia | Moscow | USSR)
Bookmark and Share Feedback Print
 
ರಷ್ಯಾದಲ್ಲಿ ಪ್ರಜಾಪ್ರಭುತ್ವ ಸ್ಥಾಪನೆಯಾಗಿದ್ದರೂ ಕೂಡ ಅದು ಅಡ್ಡಿ ಆತಂಕಗಳಿಂದ ದೇಶದ ಅಭಿವೃದ್ಧಿ ಕುಂಠಿತವಾಗುವಂತಾಗಿದೆ ಎಂದು ಸೋವಿಯತ್ ಒಕ್ಕೂಟದ ಮಾಜಿ ಅಧ್ಯಕ್ಷ ಮೈಕೆಲ್ ಗೋರ್ಬಚೆವ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ದೇಶದ ನಾಗರಿಕ ಸಮಾಜವನ್ನು ಅಭಿವೃದ್ಧಿಪಡಿಸುವಂತೆ ರಷ್ಯಾ ಸರ್ಕಾರವನ್ನು ಕೋರಿರುವ ಅವರು, ದೇಶವನ್ನು ಆಧುನಿಕತೆಯತ್ತ ಕೊಂಡೊಯ್ಯುವಲ್ಲಿ ದಿಟ್ಟ ಹೆಜ್ಜೆಯನ್ನಿಡಬೇಕು ಎಂದು ಸಲಹೆ ನೀಡಿದ್ದಾರೆ.

ದೇಶದ ಅಭಿವೃದ್ಧಿಗೆ ಪ್ರಜಾಪ್ರಭುತ್ವವೇ ಪ್ರಮುಖವಾದದ್ದು ಎಂಬುದನ್ನು ಬಲವಾಗಿ ನಂಬಿದ್ದೇನೆ. ಆದರೆ ಇದರಿಂದ ತುಂಬಾ ನಷ್ಟವೇ ಉಂಟಾಗಿದೆ. ರಷ್ಯಾದಲ್ಲಿ ಪ್ರಜಾಪ್ರಭುತ್ವ ಪ್ರಕ್ರಿಯೆಗೆ ತೊಡಕುಂಟಾಗಿದ್ದು, ಅದಕ್ಕೆ ಹಿನ್ನಡೆ ಉಂಟಾಗಿದೆ ಎಂದು ರೋಸಿಸ್‌ಕಾಯಾ ಗಜೆಟ್ಸ್‌ನಲ್ಲಿ ಬರೆದ ಲೇಖನದಲ್ಲಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಗೋರ್ಬಚೆವ್ ಅವರು 1985ರಲ್ಲಿ ಸೋವಿಯತ್ ಒಕ್ಕೂಟದ ಆಡಳಿತರೂಢ ಕಮ್ಯೂನಿಷ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. 1991ರಲ್ಲಿ ಸೋವಿಯತ್ ಒಕ್ಕೂಟ ಛಿದ್ರಛಿದ್ರವಾಗಿತ್ತು.

ಆದರೆ ಇದೀಗ ರಷ್ಯಾದಲ್ಲಿ ಪ್ರಸಕ್ತವಾಗಿ ಪ್ರಜಾಪ್ರಭುತ್ವ ಇದ್ದರೂ ಕೂಡ ಅಭಿವೃದ್ಧಿ ಮಾತ್ರ ಕುಂಠಿತವಾಗಿದೆ. ಈಗಲೂ ರಷ್ಯಾ ಪ್ರತಿಯೊಂದನ್ನು ಹತೋಟಿಯಲ್ಲಿಡಲು ಪ್ರಯತ್ನಿಸುತ್ತಿದೆ ಎಂದು ದೂರಿದ್ದಾರೆ. ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಲು ಭಯಪಡುತ್ತಿದ್ದಾರೆ ಎಂದು ಲೇಖನದಲ್ಲಿ ಆರೋಪಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ