ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕ್ : ಸರಕಾರಿ ಶಾಲೆಯನ್ನು ಸ್ಫೋಟಿಸಿದ ಉಗ್ರರು (Militants | Pakistan | Girls school | Bajaur agency)
Bookmark and Share Feedback Print
 
ಪಾಕಿಸ್ತಾನದ ಆಗ್ನೇಯ ಭಾಗದಲ್ಲಿರುವ ಬಜೌರ್ ಬುಡಕಟ್ಟು ಪ್ರದೇಶದಲ್ಲಿ, ತಾಲಿಬಾನ್ ಬೆಂಬಲಿತ ಉಗ್ರರು ಸರಕಾರಿ ಶಾಲೆಯೊಂದನ್ನು ಸ್ಫೋಟಿಸಿದ್ದಾರೆ.

ಕಳೆದ ಹಲವು ದಿನಗಳಿಂದ ಸರಕಾರಿ ಶಾಲೆಗಳನ್ನು ಗುರಿಯಾಗಿಸಿಕೊಂಡ ಉಗ್ರರು, ಇದೀಗ 10ನೇ ಬಾರಿ ಸರಕಾರಿ ಶಾಲೆಯನ್ನು ನಾಶಪಡಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬಜೌರ್‌ನ ಖಾವ್ಗಾ ಚಿನಾ ಗ್ರಾಮದಲ್ಲಿರುವ ಸರಕಾರಿ ಪ್ರಾಥಮಿಕ ಶಾಲೆಯನ್ನು, ಸ್ಫೋಟಕ ವಸ್ತುಗಳನ್ನು ಬಳಸಿ ಶಾಲೆಯ ಕಟ್ಟಡವನ್ನು ನಾಶಪಡಿಸಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.

ಶಾಲೆಯನ್ನು ಸ್ಫೋಟಿಸಿದ ಉಗ್ರರ ವಿರುದ್ಧ ಸೇನಾಪಡೆಗಳು ಭಾರಿ ಕಾರ್ಯಾಚರಣೆ ನಡೆಸಿದ್ದು,ಆರು ಜನರನ್ನು ಬಂಧಿಸಲಾಗಿದೆ. ಪೊಲೀಸರು ಆರೋಪಿಗಳನ್ನು ಅಜ್ಞಾತ ಸ್ಥಳಕ್ಕೆ ಸ್ಥಳಾಂತರಿಸಲಾಗಿದ್ದು, ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.

ಕಳೆದ ಮೂರು ವರ್ಷಗಳ ಅವಧಿಯಲ್ಲಿ, ತಾಲಿಬಾನ್ ಉಗ್ರರು, ಸುಮಾರು 74 ಶಾಲೆಗಳನ್ನು ನಾಶಪಡಿಸಿದ್ದಾರೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ವಿವರಣೆ ನೀಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ