ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಮಧ್ಯಸ್ಥಿಕೆ ವಹಿಸುವ ಯಾವುದೇ ಇರಾದೆಯಿಲ್ಲ.ಇತರ ರಾಷ್ಟ್ರಗಳ ವಿದೇಶಾಂಗ ನೀತಿಗಳನ್ನು ಪ್ರೋತ್ಸಾಹಿಸುತ್ತದೆ ಹೊರತು ಆದೇಶ ನೀಡುವುದಿಲ್ಲ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಹಿಲೆರಿ ಕ್ಲಿಂಟನ್ ಪಾಕ್‌ಗೆ ಸ್ಪಷ್ಟಪಡಿಸಿದ್ದಾರೆ.
ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿ ಶಾ ಮೊಹಮ್ಮದ್ ಖುರೇಷಿಯವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕ್ಲಿಂಟನ್, ಭಾರತ ಮತ್ತು ಪಾಕಿಸ್ತಾನ ಮಧ್ಯೆ ಎದುರಾಗಿರುವ ಸಮಸ್ಯೆಗಳು ಇತ್ಯರ್ಥವಾಗಲಿ ಎನ್ನುವುದು ಪ್ರತಿಯೊಬ್ಬರ ಅನಿಸಿಕೆಯಾಗಿದೆ ಎಂದು ಹೇಳಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ದೇಶಗಳು ಮಾತುಕತೆಯ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅಮೆರಿಕ ಸದಾ ಪ್ರೋಕ್ಸಾಹಿಸುವುದು ಮಹತ್ವದ ಸಂಗತಿಯಾಗಿದೆ ಎಂದು ನುಡಿದರು.
ಅಮೆರಿಕ ಪಾಕಿಸ್ತಾನದ ವಿದೇಶಾಂಗ ನೀತಿ ಅಥವಾ ಭಾರತದ ವಿದೇಶಾಂಗ ನೀತಿಗಳ ಬಗ್ಗೆ ಆದೇಶ ನೀಡಲು ಸಾಧ್ಯವಿಲ್ಲ ಆದರೆ ಸಮಸ್ಯೆಗಳ ಪರಿಹಾರಕ್ಕೆ ಅಮರಿಕ ಬೆಂಬಲ ನೀಡುತ್ತದೆ. ುಭಯ ದೇಶಗಳ ಮಧ್ಯೆ ಶಾಂತಿ ಸ್ಥಾಪನೆಯಾದಲ್ಲಿ, ಭಧ್ರತೆ ಮತ್ತು ಅಭಿವೃದ್ಧಿಗೆ ನಾಂದಿಯಾಗಲಿದೆ ಎಂದರು.
ಪಾಕಿಸ್ತಾನಕ್ಕೆ ಥರ್ಮಲ್ ಪವರ್ ಘಟಕಗಳು ಸೇರಿದಂತೆ ಇಂಧನ ಕ್ಷೇತ್ರದಲ್ಲಿ ನೆರವು ನೀಡುವುದಾಗಿ ಘೋಷಿಸಿದ ಕ್ಲಿಂಟನ್, ಆದರೆ ಇಸ್ಲಾಮಾಬಾದ್ ಒತ್ತಾಯಿಸುತ್ತಿರುವ ನಾಗರಿಕ ಪರಮಾಣು ನೆರವಿನ ಬಗ್ಗೆ ಚಕಾರವೆತ್ತಲಿಲ್ಲ.