ಪಾಕ್: ತಾಲಿಬಾನ್ ಉಗ್ರರಿಂದ 2ವರ್ಷದಲ್ಲಿ ನೂರು ಶಾಲೆ ಧ್ವಂಸ!
ಇಸ್ಲಾಮಾಬಾದ್, ಮಂಗಳವಾರ, 6 ಏಪ್ರಿಲ್ 2010( 15:02 IST )
ಹೆಣ್ಣು ಮಕ್ಕಳ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಉಗ್ರರು ಧ್ವಂಸಗೊಳಿಸಿದ್ದು, ಅಪರಿಚಿತ ವ್ಯಕ್ತಿಗಳು ಏಳು ತೈಲ ಟ್ಯಾಂಕರ್‌ಗಳಿಗೆ ಬೆಂಕಿ ಹಚ್ಚಿರುವ ಘಟನೆ ಪಾಕಿಸ್ತಾನ-ಅಫ್ಘಾನಿಸ್ತಾನ ಗಡಿಭಾಗದ ಬುಡಕಟ್ಟು ಪ್ರದೇಶದಲ್ಲಿ ಸೋಮವಾರ ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಹೆಣ್ಣು ಮಕ್ಕಳು ಶಾಲೆಗೆ ಹೋಗುವುದನ್ನು ಬಲವಾಗಿ ವಿರೋಧಿಸುತ್ತಿರುವ ತಾಲಿಬಾನ್ ಉಗ್ರರು ಮೊಹಮ್ಮದ್ ಜಿಲ್ಲೆಯಲ್ಲಿ ಹಲವಾರು ಶಾಲೆಗಳನ್ನು ಧ್ವಂಸಗೊಳಿಸಿದ್ದು, ಆ ಸಂಖ್ಯೆ 40ಕ್ಕೆ ತಲುಪಿದೆ.
ಅಲ್ಲದೇ ಕಳೆದ ಎರಡು ವರ್ಷಗಳಲ್ಲಿ ಪಾಕಿಸ್ತಾನದಲ್ಲಿ ತಾಲಿಬಾನ್ ಉಗ್ರರು ಸುಮಾರು ನೂರಾರು ಹೆಣ್ಣು ಮಕ್ಕಳ ಶಾಲೆಗಳನ್ನು ಧ್ವಂಸಗೊಳಿಸಿರುವುದಾಗಿ ಅಧಿಕಾರಿಗಳು ವಿವರಿಸಿದ್ದಾರೆ.
ಸೋಮವಾರ ಮೊಹಮ್ಮದ್ ಜಿಲ್ಲೆಯ ಬೈಜಾಯ್ ಪ್ರದೇಶದಲ್ಲಿ ಹೆಣ್ಣು ಮಕ್ಕಳ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಉಗ್ರರು ಧ್ವಂಸಗೊಳಿಸಿದ್ದರು. ಅದೇ ರೀತಿ ಅಪರಿಚಿತ ವ್ಯಕ್ತಿಗಳು ಏಳು ತೈಲ ಟ್ಯಾಂಕರ್‌ಗಳಿಗೆ ಬೆಂಕಿ ಹಚ್ಚಿ ಸುಟ್ಟಿರುವುದಾಗಿ ಕ್ಸಿನ್‌ಹುವಾ ವರದಿ ತಿಳಿಸಿದೆ.