ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕ್: ತಮ್ಮನ್ನು ತಾವೇ ಸ್ಫೋಟಿಸಿಕೊಂಡ ಉಗ್ರರು (Suicide | Bombers | Pakistan)
Bookmark and Share Feedback Print
 
ಪಾಕಿಸ್ತಾನದ ಆಗ್ರೇಯ ಭಾಗದಲ್ಲಿರುವ ಪೇಶಾವರ್ ನಗರದಲ್ಲಿ ಆತ್ಮಾಹುತಿ ದಳದ ಉಗ್ರಗಾಮಿಗಳನ್ನು ಪೊಲೀಸರು ಸುತ್ತುವರಿದಾಗ, ತಮ್ಮನ್ನು ತಾವು ಸ್ಪೋಟಿಸಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಾರ್ಥ್‌ವೆಸ್ಟ್ ಫ್ರಂಟೈಯರ್ ಪ್ರಾಂತ್ಯದ ಕರಾಕ್ ಜಿಲ್ಲೆಯಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದಾಗ, ಅನುಮಾನಾಸ್ಪದ ಚಟುವಟಿಕೆಗಳಿಂದಾಗಿ ಶಂಕಿತ ಉಗ್ರರನ್ನು ಬೆನ್ನಟಿದ್ದರಿಂದ ಆತ್ಮಾಹುತಿ ದಳದ ಉಗ್ರರು ಸ್ಫೋಟಿಸಿಕೊಂಡಿದ್ದಾರೆ ಎದು ಉನ್ನತ ಅಧಿಕಾರಿಗಳು ಹೇಳಿದ್ದಾರೆ.

ಪೊಲೀಸ್ ಅಧಿಕಾರಿಗಳು ಉಗ್ರರ ತಪಾಸಣೆಗೆ ಒತ್ತಾಯಿಸಿದಾಗ, ದೇಹದ ಸುತ್ತಲು ಕಟ್ಟಿಕೊಂಡಿದ್ದ ಸ್ಫೋಟಕಗಳನ್ನು ಸಿಡಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸ್ಫೋಟದಲ್ಲಿ ಯಾವುದೇ ಸಾವು ನೋವುಗಳಾಗಿಲ್ಲ. ಪೊಲೀಸರು ಮೃತ ಉಗ್ರರ ದೇಹಗಳನ್ನು ವಶಕ್ಕೆ ತೆಗೆದುಕೊಂಡಿದ್ದು, ಉಗ್ರರ ಸಹಚರರಿಗಾಗಿ ವ್ಯಾಪಕ ಶೋಧ ನಡೆಸಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ