ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಅಮೆರಿಕಾದಲ್ಲಿ ಮುಖಾಮುಖಿಯಾದ ಪ್ರಧಾನಿ ಸಿಂಗ್-ಗಿಲಾನಿ (India | Pakistan | Manmohan Singh | Yousuf Raza Gilani)
Bookmark and Share Feedback Print
 
ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಅಮೆರಿಕಾಕ್ಕೆ ತೆರಳಿರುವ ಭಾರತದ ಪ್ರಧಾನಿ ಮನಮೋಹನ್ ಸಿಂಗ್‌ ಮತ್ತು ಪಾಕಿಸ್ತಾನ ಪ್ರಧಾನ ಮಂತ್ರಿ ಯೂಸುಫ್ ರಾಜಾ ಗಿಲಾನಿ ಕಿರು ಮಾತುಕತೆ ನಡೆಸಿದ್ದಾರೆ ಎಂದು ಸರಕಾರಿ ಮೂಲಗಳು ತಿಳಿಸಿವೆ.

ಅಮೆರಿಕಾದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸಮ್ಮೇಳನದ ಸಂದರ್ಭದಲ್ಲಿ ಗಿಲಾನಿಯವರನ್ನು ಭೇಟಿ ಮಾಡಿರುವ ಮನಮೋಹನ್ ಸಿಂಗ್, ಕೇವಲ ಐದು ನಿಮಿಷಗಳ ಮಾತುಕತೆ ನಡೆಸಿದ್ದಾರೆ. ಇಲ್ಲಿ ನಡೆಯುತ್ತಿರುವ ಎರಡು ದಿನಗಳ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮಾರಿಂದ ನಡೆದ ಔತಣ ಕೂಟದಲ್ಲಿ ಇವರಿಬ್ಬರು ಭೇಟಿಯಾದರು.

ಮಾತುಕತೆಯ ವೇಳೆ ಯಾವ ವಿಷಯವನ್ನು ಪ್ರಸ್ತಾಪಿಸಲಾಗಿದೆಯೆಂದು ತಿಳಿದು ಬಂದಿಲ್ಲ.

ದೂರದಲ್ಲಿದ್ದ ಗಿಲಾನಿಯವರು ಸಿಂಗ್ ಬಳಿ ತೆರಳಿದ ನಂತರ ಇಬ್ಬರೂ ನಾಯಕರು ಹಸ್ತಲಾಘವ ಮಾಡಿಕೊಂಡರು. ಇಬ್ಬರ ಮುಖದಲ್ಲೂ ನಗು ಸಂಚರಿಸುತ್ತಿತ್ತು. ಈ ಸಂದರ್ಭದಲ್ಲಿ ಉಭಯ ನಾಯಕರು ಯಾವುದೇ ಪ್ರಮುಖ ವಿಚಾರಗಳ ಕುರಿತು ಮಾತುಕತೆ ನಡೆಸಿರುವ ಸಾಧ್ಯತೆಗಳು ಕಡಿಮೆ ಎಂದು ವರದಿಗಳು ಹೇಳಿವೆ.

ಫೆಬ್ರವರಿಯಲ್ಲಿ ವಿದೇಶಾಂಗ ಕಾರ್ಯದರ್ಶಿಗಳ ಭೇಟಿಯಾದ ನಂತರ ಉಭಯ ದೇಶಗಳ ಉನ್ನತ ನೇತಾರರು ಇದೇ ಮೊದಲ ಬಾರಿಗೆ ಭೇಟಿಯಾಗಿದ್ದಾರೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ
ಸಂಬಂಧಿತ ಮಾಹಿತಿ ಹುಡುಕಿ