ಚೀನಾದ ವಾಯುವ್ಯ ಭಾಗದಲ್ಲಿರುವ ಕ್ವಿಂಗ್‌ಹೈ ಪ್ರಾಂತ್ಯದ ಜಿಗು ಪಟ್ಟಣದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮಡಿದವರ ಸಂಖ್ಯೆ 617ಕ್ಕೆ ಏರಿಕೆಯಾಗಿದ್ದು, ರಕ್ಷಣಾ ಕಾರ್ಯಾಚರಣೆಯು ಇದೀಗಲೂ ಜಾರಿಯಲ್ಲಿದೆ.
ಘಟನೆಯಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ಮೂಲಗಳು ತಿಳಿಸಿವೆ. ಭೂಕಂಪದ ತೀವ್ರತೆಗೆ ಹಲವಾರು ಮನೆ ಹಾಗೂ ಶಾಲೆಗಳು ನೆಲಸಮಗೊಂಡಿವೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಬುಧವಾರ ಬೆಳಿಗ್ಗೆ ಸಂಭವಿಸಿದ ಭೂಕಂಪದ ತೀವ್ರತೆಯು ರಿಕ್ಟರ್ ಮಾಪನದಲ್ಲಿ 7.1ರಷ್ಟು ದಾಖಲಾಗಿತ್ತು.
ಭೂಕಂಪದಲ್ಲಿ ಭಾರತೀಯರು ಮೃತಪಟ್ಟಿರುವ ಕುರಿತಂತೆ ಇದುವರೆಗೆ ವರದಿಗಳು ಬಂದಿಲ್ಲ ಎಂದು ಬೀಜಿಂಗ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ತಿಳಿಸಿದೆ.