ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಉಗ್ರರ ವಿರುದ್ಧ ಹೋರಾಟ; ನಿಲುವಿಗೆ ಪಾಕ್ ಬದ್ಧ (India | Pakistan | Obama | US)
Bookmark and Share Feedback Print
 
ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿದಂತೆ ಭಾರತ ಹಾಗೂ ಅಮೆರಿಕಾಗಳಿಗೆ ಸಂಪೂರ್ಣ ಸಹಕಾರ ನೀಡಲು ಪಾಕಿಸ್ತಾನ ಬದ್ಧವಾಗಿದೆ ಎಂದು ಆ ದೇಶ ಒಪ್ಪಿಕೊಂಡಿದೆ ಎಂದು ಬರಾಕ್ ಒಬಾಮಾ ಆಡಳಿತದ ಅಧಿಕಾರಿಗಳು ತಿಳಿಸಿದ್ದಾರೆ.

ಅಮೆರಿಕಾ ಮತ್ತು ಭಾರತ ದೇಶಗಳೊಂದಿಗೆ ಸಹಕರಿಸಿ ಕೆಲಸ ಮಾಡಲು ಪಾಕಿಸ್ತಾನ ಬದ್ಧವಾಗಿದೆ. ಅಲ್ಲದೆ ಅಪರಾಧಿಗಳಿಗೆ ಶಿಕ್ಷೆ ನೀಡುವಲ್ಲಿ ಪ್ರಸಕ್ತ ನಡೆಯುತ್ತಿರುವ ತನಿಖೆಗೆ ಪೂರ್ಣ ಸಹಕಾರ ಒದಗಿಸಲಿದೆ ಎಂದು ಸಾರ್ವಜನಿಕ ವ್ಯವಹಾರಗಳ ಸಹಾಯಕ ಕಾರ್ಯದರ್ಶಿ ಪಿ. ಜೆ. ಕ್ರೊವ್ಲೆ ತಿಳಿಸಿದ್ದಾರೆ.

ದಕ್ಷಿಣ ಏಷಿಯಾ ರಾಷ್ಟ್ರದಲ್ಲಿರುವ ಉಗ್ರಗಾಮಿ ಸಂಘಟನೆಗಳ ಬಗ್ಗೆಯೂ ಒಬಾಮಾ ಆಡಳಿತವು ಎಚ್ಚರಿಕೆಯಿಂದಿದೆ ಎಂದವರು ತಿಳಿಸಿದರು. ಇದು ಪಾಕಿಸ್ತಾನದೊಂದಿಗೆ ನಡೆಯುತ್ತಿರುವ ಮಾತುಕತೆಯ ಭಾಗವಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ