ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಅಫ್ಘಾನಿಸ್ತಾನ: ಭೂಕಂಪಕ್ಕೆ ಏಳು ಬಲಿ (Afghanistan | earthquake | Kabul | Mazar-i-Sharif)
Bookmark and Share Feedback Print
 
ಅಫ್ಘಾನಿಸ್ತಾನದ ಉತ್ತರ ಭಾಗದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಭೂಕಂಪದಿಂದಾಗಿ ಏಳು ಮಂದಿ ಸಾವನ್ನಪ್ಪಿದ್ದು, ಸುಮಾರು 30ಜನರು ಗಾಯಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ರಿಕ್ಟರ್ ಮಾಪಕದಲ್ಲಿ 5.3ರಷ್ಟು ತೀವ್ರತೆ ದಾಖಲಾಗಿದೆ. ಕಾಬೂಲ್ ಹಾಗೂ ಉತ್ತರ ನಗರವಾದ ಮಾಜಾರ್ ಐ ಷರೀಫ್ ಎಂಬಲ್ಲಿ ಈ ಭೂಕಂಪ ಸಂಭವಿಸಿರುವುದಾಗಿ ಪ್ರಾಂತ್ಯೀಯ ಸಹಾಯಕ ಗವರ್ನರ್ ಕುಲಾಮ್ ಸಾಖಿ ಬಾಗ್ಲಾನಿ ಹೇಳಿದ್ದಾರೆ.

ಭೂಕಂಪ ಸಂಭವಿಸಿದ ಪ್ರದೇಶದಲ್ಲಿ ರಸ್ತೆ ಮತ್ತು ದೂರವಾಣಿ ಸಂಪರ್ಕ ಕಡಿತಗೊಂಡಿದೆ. ಆದರೆ ಭೂಕಂಪನದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಖಚಿತವಾಗಿ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ವಿವರಿಸಿದ್ದಾರೆ. ನೆರೆ ರಾಷ್ಟ್ರಗಳಾದ ಉಜ್ಬೇಕಿಸ್ತಾನ್ ಮತ್ತು ತಜಕಿಸ್ತಾನ್‌ಗಳಲ್ಲಿಯೂ ಭೂಕಂಪ ಸಂಭವಿಸಿರುವುದಾಗಿ ತಿಳಿಸಿದ್ದಾರೆ.

ಭೂಕಂಪದಿಂದಾಗಿ ಮೂರು ಜಿಲ್ಲೆಯ ಸುಮಾರು 300ಮನೆಗಳು ಹಾನಿಗೊಂಡಿದ್ದು, ಏಳು ಮಂದಿ ಸಾವನ್ನಪ್ಪಿದ್ದಾರೆ. ರಸ್ತೆ ಸಂಪರ್ಕ ಕಡಿತಗೊಂಡಿದ್ದು, ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ