ಪಾಕಿಸ್ತಾನದ ಪ್ರಮುಖ ನಗರವಾದ ಪೇಶಾವರದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಅನ್ನು ಖಂಡಿಸಿ ಆತ್ಮಹತ್ಯಾ ಬಾಂಬ್ ದಾಳಿ ನಡೆಸಿದ ಪರಿಣಾಮ ಸುಮಾರು 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ 20ಮಂದಿ ಸಾವನ್ನಪ್ಪಿದ್ದಾರೆ. ಆದರೆ ಎಷ್ಟು ಮಂದಿ ಬಲಿಯಾಗಿದ್ದಾರೆ ಮತ್ತು ಯಾವ ರೀತಿಯಲ್ಲಿ ಸ್ಫೋಟ ಸಂಭವಿಸಿದೆ ಎಂಬ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಉನ್ನತ ಅಧಿಕಾರಿ ಅಜಾಮ್ ಖಾನ್ ಹೇಳಿದ್ದಾರೆ.
ಈ ಆತ್ಮಹತ್ಯಾ ಬಾಂಬ್ ದಾಳಿ ಹಳೇ ನಗರವಾದ ಸ್ಟೋರಿಟೆಲ್ಲರ್ಸ್ ಬಜಾರ್ ಸಮೀಪ ನಡೆದಿರುವುದಾಗಿ ಮತ್ತೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಒಟ್ಟಾರೆ ಘಟನೆಯಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬುದು ಖಚಿತವಾಗಿಲ್ಲ.