ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಫ್ರಾನ್ಸ್- ಬೆಲ್ಜಿಯಂ ಸಾರ್ವಜನಿಕ ಸ್ಥಳಗಳಲ್ಲಿ 'ಬುರ್ಖಾ ನಿಷೇಧ' (France | Belgium | ban burqa | Paris | Nicolas Sarkozy)
Bookmark and Share Feedback Print
 
PTI
ಫ್ರಾನ್ಸ್ ಹಾಗೂ ಬೆಲ್ಜಿಯಂನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮ್ ಮಹಿಳೆಯರು ಬುರ್ಖಾ ಧರಿಸುವುದನ್ನು ನಿಷೇಧಿಸುವ ದೃಢ ನಿರ್ಧಾರ ಕೈಗೊಂಡಿದೆ.

ಬೀದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮ್ ಮಹಿಳೆಯರು ಬುರ್ಖಾ ಧರಿಸಿ ಓಡಾಡುವುದಕ್ಕೆ ನಿಷೇಧ ಹೇರಿ ಸಂಸತ್‌ನಲ್ಲಿ ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ ಎಂದು ಫ್ರಾನ್ಸ್ ಅಧ್ಯಕ್ಷ ನಿಕೋಲಸ್ ಸರ್ಕೋಜಿ ಬುಧವಾರ ತಿಳಿಸಿದ್ದಾರೆ.

ಅದೇ ರೀತಿಯಲ್ಲಿ ಫ್ರಾನ್ಸ್ ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ ಧರಿಸುವುದಕ್ಕೆ ನಿಷೇಧ ಹೇರಿರುವ ಹಾದಿಯಲ್ಲೇ ಬೆಲ್ಜಿಯಂ ಕೂಡ ಬುರ್ಖಾಕ್ಕೆ ನಿಷೇಧ ಹೇರಿದೆ. ಆ ನಿಟ್ಟಿನಲ್ಲಿ ಯಾವುದೇ ಕಾರಣಕ್ಕೂ ಮುಸ್ಲಿಮ್ ಮಹಿಳೆಯರು ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ ಧರಿಸಿ ಓಡಾಡುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಸರ್ಕೋಜಿ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಫ್ರಾನ್ಸ್ ಬುರ್ಖಾ ನಿಷೇಧಕ್ಕೆ ಮುಂದಾದ ಬೆನ್ನಲ್ಲೇ ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ ಧರಿಸುವುದನ್ನು ನಿಷೇಧಿಸುವ ಸಂಬಂಧ ಬೆಲ್ಜಿಯಂ ಸರ್ಕಾರ ಕೂಡ ಚಿಂತನೆ ನಡೆಸಿತ್ತು. ಕಾನೂನು ತಜ್ಞರ ಸಲಹೆ ಮೇರೆಗೆ ಈ ಸಂಬಂಧ ಕರಡು ಕಾನೂನನ್ನು ರಚಿಸಿತ್ತು. ಆ ಹಿನ್ನೆಲೆಯಲ್ಲಿ ಗುರುವಾರ ಅಧಿಕೃತವಾಗಿ ಬುರ್ಖಾವನ್ನು ನಿಷೇಧಿಸಿರುವುದಾಗಿ ಘೋಷಿಸಿದೆ. ಆ ನೆಲೆಯಲ್ಲಿ ಬುರ್ಖಾ ನಿಷೇಧಕ್ಕೆ ಅಂಗೀಕಾರ ದೊರೆಯುವ ಮೂಲಕ ಬೆಲ್ಜಿಯಂ ಬುರ್ಖಾ ನಿಷೇಧಿಸಿದ ಪ್ರಥಮ ಐರೋಪ್ಯ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಒಂದು ವೇಳೆ ಕಾನೂನು ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ ಧರಿಸಿ ಸಂಚರಿಸಿದ್ದು ಕಂಡು ಬಂದಲ್ಲಿ 15-25ಯುರೋ(20-34ಯುಎಸ್ ಡಾಲರ್) ದಂಡ ಅಥವಾ ಏಳು ದಿನಗಳವರೆಗೆ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಫ್ರಾನ್ಸ್ ಮತ್ತು ಬೆಲ್ಜಿಯಂ ಎಚ್ಚರಿಕೆ ನೀಡಿವೆ.
ಸಂಬಂಧಿತ ಮಾಹಿತಿ ಹುಡುಕಿ