ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಶೀಘ್ರದಲ್ಲೇ ಹೆಡ್ಲಿ ವಿಚಾರಣೆಗೆ ಅವಕಾಶ: ಭಾರತಕ್ಕೆ ಅಮೆರಿಕಾ (India | David Coleman Headley | Mumbai terror attacks | Terrorist)
Bookmark and Share Feedback Print
 
2008ರ ಮುಂಬೈ ಭಯೋತ್ಪಾದನಾ ದಾಳಿಗೆ ಯೋಜನೆ ರೂಪಿಸಿದ್ದ ಪಾಕಿಸ್ತಾನ ಮೂಲದ ಅಮೆರಿಕಾ ಭಯೋತ್ಪಾದಕ ಡೇವಿಡ್ ಕೋಲ್ಮನ್ ಹೆಡ್ಲಿ ಯಾನೆ ದಾವೂದ್ ಸಯೀದ್ ಗಿಲಾನಿಯನ್ನು ಭಾರತ ನೇರವಾಗಿ ವಿಚಾರಣೆ ನಡೆಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವ ಭರವಸೆಯನ್ನು ಅಮೆರಿಕಾ ನೀಡಿದೆ.

ಈ ಸಂಬಂಧ ಭಾರತದ ಸೋಲಿಸಿಟರ್ ಜನರಲ್ ಗೋಪಾಲ ಸುಬ್ರಮಣ್ಯಂ ಮತ್ತು ಅಮೆರಿಕಾ ಅಟಾರ್ನಿ ಜನರಲ್ ಎರಿಕ್ ಹೋಲ್ಡರ್ ನಡುವೆ ಮಂಗಳವಾರ ಮಹತ್ವದ ಮಾತುಕತೆಗಳು ನಡೆದಿವೆ. ಈ ಸಂದರ್ಭದಲ್ಲಿ ಭಾರತೀಯ ರಾಯಭಾರಿ ಮೀರಾ ಶಂಕರ್ ಮತ್ತು ಅಮೆರಿಕಾ ಕಾನೂನು ಇಲಾಖೆಯ ಅಧಿಕಾರಿಗಳು ಕೂಡ ಹಾಜರಿದ್ದರು.

ಸಾಧ್ಯವಾದಷ್ಟು ಶೀಘ್ರದಲ್ಲಿ ಡೇವಿಡ್ ಹೆಡ್ಲಿಯನ್ನು ನೇರವಾಗಿ ವಿಚಾರಣೆ ನಡೆಸಲು ಭಾರತಕ್ಕೆ ಸಾಧ್ಯವಾಗುವಂತೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಅಮೆರಿಕಾದ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಸಭೆಯ ನಂತರ ಭಾರತೀಯ ರಾಯಭಾರ ಕಚೇರಿ ಪ್ರತಿಕ್ರಿಯಿಸಿದೆ. ಆದರೆ ಅಮೆರಿಕಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ರಾಷ್ಟ್ರದ ಎಲ್ಲಾ ಭದ್ರತಾ ವಿಚಾರಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕಾಗಳು ಪ್ರಥಮ ಆದ್ಯತೆಯನ್ನು ನೀಡುತ್ತಿವೆ. ಹಾಗಾಗಿ ಯಶಸ್ವಿ ಮತ್ತು ಫಲಪ್ರದ ಫಲಿತಾಂಶವನ್ನು ಪಡೆಯುವ ನಿಟ್ಟಿನಲ್ಲಿ ಇನ್ನಷ್ಟು ತನಿಖೆಗಳು ಅಗತ್ಯವಿದೆ ಎಂಬುದನ್ನು ಎರಡೂ ರಾಷ್ಟ್ರಗಳು ಪರಿಗಣಿಸಿವೆ ಎಂದು ಭಾರತದ ಅಧಿಕಾರಿಗಳು ತಿಳಿಸಿದ್ದಾರೆ.

ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ನಾವು ಪರಸ್ಪರ ಬದ್ಧತೆಯಿಂದ ಹೋರಾಟ ನಡೆಸುತ್ತಿದ್ದು, ಪೂರಕವಾಗಿ ಕೆಲಸಗಳನ್ನು ಮಾಡುತ್ತಿದ್ದೇವೆ. ಅದೇ ರೀತಿ ನಡೆದ ಮಾತುಕತೆಯಲ್ಲಿ ಪರಸ್ಪರ ಬದ್ಧತೆಯ ಫಲಿತಾಂಶವನ್ನು ನೀಡಿದೆ ಎಂದು ಅವರು ವಿವರಣೆ ನೀಡಿದ್ದಾರೆ.

ಮುಂಬೈ ದಾಳಿ ಪ್ರಕರಣದಲ್ಲಿ ಮರಣ ದಂಡನೆ ಶಿಕ್ಷೆಯಿಂದ ಪಾರಾಗಲು ತಪ್ಪೊಪ್ಪಿಗೆ ನೀಡಿದ್ದ ಹೆಡ್ಲಿಯ ವಿಚಾರಣೆ ನಡೆಸಲು ಭಾರತಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಇತ್ತೀಚೆಗಷ್ಟೇ ಅಮೆರಿಕಾಕ್ಕೆ ಭೇಟಿ ನೀಡಿದ್ದ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರಿಗೆ ಅಧ್ಯಕ್ಷ ಬರಾಕ್ ಒಬಾಮಾ ಭರವಸೆ ನೀಡಿದ್ದರು.
ಸಂಬಂಧಿತ ಮಾಹಿತಿ ಹುಡುಕಿ