ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಅಫ್ಘಾನ್ ಪೊಲೀಸರಿಂದ 300 ರಾಕೆಟ್ ವಶ (300 rockets | Kabul | Afghan police | Taliban)
Bookmark and Share Feedback Print
 
ಕಾಬೂಲ್‌ನ ಹೊರವಲಯದಲ್ಲಿ ಅಡಗಿಸಿಟ್ಟ ಸುಮಾರು 300 ರಾಕೆಟ್‌ಗಳನ್ನು ವಶಪಡಿಸಿಕೊಂಡಿರುವುದಾಗಿ ಅಫ್ಘಾನಿಸ್ತಾನ ಪೊಲೀಸರು ಶನಿವಾರ ತಿಳಿಸಿದ್ದಾರೆ.

ವಶಪಡಿಸಿಕೊಂಡ 278 ರಾಕೆಟ್‌ಗಳು 122ಎಂಎಂನದ್ದಾಗಿದ್ದು, 20ಕಿ.ಮೀ.ದೂರ ನೆಗೆಯಬಲ್ಲ ಸಾಮರ್ಥ್ಯ ಹೊಂದಿವೆ. 15ರಾಕೆಟ್‌ಗಳು 30ಕಿ.ಮೀ, ದೂರ ನೆಗೆಯಬಲ್ಲ ಸಾಮರ್ಥ್ಯ ಹೊಂದಿರುವುದಾಗಿ ನಗರ ಪೊಲೀಸ್ ಅಧಿಕಾರಿ ಅಬ್ದುಲ್ ರೆಹಮಾನ್ ಸುದ್ದಿಗಾರರೊಂದಿಗೆ ಮಾತನಾಡುತ್ತ ವಿವರಿಸಿದ್ದಾರೆ.

ಮೇ 29ರಂದು ಸಾವಿರಕ್ಕೂ ಅಧಿಕ ಕಮ್ಯೂನಿಟಿ ಮತ್ತು ರಾಜಕೀಯ ಮುಖಂಡರು ಪಾಲ್ಗೊಳ್ಳಲಿರುವ ಸಮಾರಂಭದ ಮೇಲೆ ದಾಳಿ ನಡೆಸಲು ತಾಲಿಬಾನ್ ಸಂಚು ರೂಪಿಸಿದೆ ಎಂಬ ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿತ್ತು ಎಂದು ತಿಳಿಸಿದ್ದಾರೆ.

ತಾಲಿಬಾನ್ ಉಗ್ರರು ಕಾಬೂಲ್‌ನ ಆಗ್ನೇಯ ಮತ್ತು ನೈರುತ್ಯ ಭಾಗಗಳಲ್ಲಿ ದಾಳಿ ನಡೆಸಲಿದ್ದಾರೆಂಬ ಮಾಹಿತಿ ಲಭಿಸಿತ್ತು. ಈ ರಾಕೆಟ್‌ಗಳು 1980ರಲ್ಲಿ ಸೋವಿಯತ್ ಒಕ್ಕೂಟ ಅಫ್ಘಾನಿಸ್ತಾನದಲ್ಲಿ ಸಮರ ನಡೆಸುತ್ತಿದ್ದ ವೇಳೆ ಉಪಯೋಗಿಸದೆ ಬಿಟ್ಟವುಗಳಾಗಿವೆ. ಅಲ್ಲದೇ ಅಫ್ಘಾನಿಸ್ತಾನದಲ್ಲಿನ ಉಗ್ರರಿಗೆ ಪಾಕಿಸ್ತಾನ ಬೆಂಬಲ ನೀಡುತ್ತಿರುವುದಾಗಿಯೂ ಅಫ್ಘಾನ್ ಅಧಿಕಾರಿಗಳು ಆರೋಪಿಸಿದ್ದಾರೆ.

ನೆರೆಯ ಭಾರತ ದೇಶದ ವಿರುದ್ಧ ಎತ್ತಿಕಟ್ಟಲು ಪಾಕಿಸ್ತಾನ ಉಗ್ರರಿಗೆ ಎಲ್ಲ ರೀತಿಯ ನೆರವು ನೀಡುತ್ತಿರುವುದಾಗಿಯೂ ಅಫ್ಘಾನ್ ಅಧಿಕಾರಿಗಳು ಈ ಸಂದರ್ಭದಲ್ಲಿ ದೂರಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ