ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿರುವ ಭಾರತದ ರಾಯಭಾರಿ ಕಚೇರಿ ಹಾಗೂ ನ್ಯಾಟೋ ಪಡೆಗಳ ಮೇಲೆ ಆತ್ಮಾಹುತಿ ದಾಳಿಗಾಗಿ ಪಾಕಿಸ್ತಾನದ ಐಎಸ್‌ಐ ಅಫ್ಘನ್ ನೆಲವನ್ನು ಬಳಸಿಕೊಳ್ಳುತ್ತಿದೆ ಅಧಿಕಾರಿಗಳು ಕಿಡಿಕಾರಿದ್ದಾರೆ.
ಅಫ್ಘಾನಿಸ್ತಾನದ ಗುಪ್ತಚರ ದಳದ ಮುಖ್ಯಸ್ಥ ಸಯೀದ್ ಅನ್ಸಾರಿ ಮಾತನಾಡಿ, ಬಂಧಿನ ಏಳು ಆರೋಪಿಗಳಿಂದ ಐಎಸ್‌ಐ ಅಫ್ಘಾನಿಸ್ತಾನದ ನೆಲದಲ್ಲಿ ಕಾರ್ಯನಿರ್ವಹಿಸುತ್ತಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಬಂಧಿತರಿಂದ ಪಾಕಿಸ್ತಾನದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ನೆರೆಯ ರಾಷ್ಟ್ರವಾದ ಪಾಕಿಸ್ತಾನ ವಿಚ್ಚಿದ್ರಕಾರಿ ಚಟುವಟಿಕೆಗಳಿಗಾಗಿ, ಅಫ್ಘಾನಿಸ್ತಾನದ ನೆಲವನ್ನು ಬಳಸಿಕೊಳ್ಳುತ್ತಿದೆ. ಉಗ್ರರಿಗೆ ತರಬೇತಿ ಮತ್ತು ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂದು ಹೇಳಿದ್ದಾರೆ.