ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » 26/11: ಲಖ್ವಿ ಖುಲಾಸೆ ಅರ್ಜಿ ಪಾಕ್‌ ಸುಪ್ರೀಂನಿಂದ ತಿರಸ್ಕೃತ (Mumbai attack | Lakhvi | Supreme court | India | Lashkar)
Bookmark and Share Feedback Print
 
ವಾಣಿಜ್ಯ ನಗರಿ ಮುಂಬೈ ದಾಳಿ ಆರೋಪಿಯಾಗಿರುವ ಲಷ್ಕರ್ ಇ ತೊಯ್ಬಾದ ಕಮಾಂಡರ್ ಜಾಕೀರ್ ರೆಹಮಾನ್ ಲಖ್ವಿ, ತನ್ನನ್ನು ಖುಲಾಸೆಗೊಳಿಸುವಂತೆ ಸಲ್ಲಿಸಿದ್ದ ಮನವಿಯನ್ನು ಪಾಕಿಸ್ತಾನ ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

ಭಯೋತ್ಪಾದನಾ ನಿಗ್ರಹ ಕೋರ್ಟ್‌ನಿಂದ ಈ ವಿಷಯದ ಕುರಿತು ಸರಿಯಾದ ತೀರ್ಪು ಲಭಿಸುವುದರ ಮುನ್ನ ಲಖ್ವಿಯ ಅರ್ಜಿಯನ್ನು ಪರಿಗಣಿಸುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ನ್ಯಾಯಮೂರ್ತಿ ಇಫ್ತಿಕಾರ್ ಚೌಧರಿ ಅವರ ನೇತೃತ್ವದ ನ್ಯಾಯಪೀಠವು ಈ ತೀರ್ಮಾನ ಪ್ರಕಟಿಸಿದ್ದು, ರಾವಲ್ಪಿಂಡಿಯಲ್ಲಿರುವ ಭಯೋತ್ಪಾದನಾ ನಿಗ್ರಹ ಕೋರ್ಟ್ ಪ್ರಸ್ತುತ ಪ್ರಕರಣಕ್ಕೆ ತೀರ್ಪನ್ನು ನೀಡಿದ ನಂತರವೇ ಲಖ್ವಿ ಅಪೆಕ್ಸ್ ಕೋರ್ಟ್‌ಗೆ ಈ ರೀತಿ ಮನವಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

ಮುಂಬೈ ದಾಳಿಯ ಆರೋಪಿಯಾಗಿರುವ ಲಖ್ವಿ ಮತ್ತು ಇತರ ಆರು ಮಂದಿ ಶಂಕಿತ ಉಗ್ರರ ವಿಚಾರಣೆ ಭಯೋತ್ಪಾದನಾ ನಿಗ್ರಹ ಕೋರ್ಟ್‌ನಲ್ಲಿ ನಡೆಯುತ್ತಿದೆ.
ಸಂಬಂಧಿತ ಮಾಹಿತಿ ಹುಡುಕಿ