ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಶ್ರೀಲಂಕಾ-ಕಿಸ್ಸಿಂಗ್ ಪುರಾಣ:ನೂರಾರು ಪ್ರೇಮಿಗಳ ಬಂಧನ (Sri Lanka | kissing couples | Colombo | police)
Bookmark and Share Feedback Print
 
ಸಾರ್ವಜನಿಕ ಸ್ಥಳದಲ್ಲಿ ಚುಂಬನದಲ್ಲಿ ತೊಡಗಿದ್ದ ನೂರಾರು ಯುವ ಪ್ರೇಮಿಗಳನ್ನು ಶ್ರೀಲಂಕಾ ಪೊಲೀಸರು ಕಾರ್ಯಾಚರಣೆ ನಡೆಸುವ ಮೂಲಕ ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಕಳೆದ ಎರಡು ವಾರಗಳಲ್ಲಿ ಲಂಕಾದ ಮಾಟಾರಾ ಮತ್ತು ಕುರುನೆಗಾಲಾ ಜಿಲ್ಲೆಯಲ್ಲಿ ಕಿಸ್ಸಿಂಗ್‌ನಲ್ಲಿ ತೊಡಗಿದ್ದ ಸುಮಾರು 200 ಜೋಡಿಗಳನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ಪೊಲೀಸ್ ವಕ್ತಾರ ಪ್ರಶಾಂತ್ ಜಯಕೊಡೈ ವಿವರಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತಿಸಿದ ಆರೋಪದ ಮೇಲೆ ಅವರನ್ನು ನಾವು ವಶಕ್ಕೆ ತೆಗೆದುಕೊಂಡಿದ್ದೇವು. ಆದರೆ ನಂತರ ಅವರ ಪೋಷಕರಿಗೆ ಮಾಹಿತಿ ನೀಡಿ ಬಂಧಿತ ಜೋಡಿಗಳ ವಿರುದ್ಧ ಯಾವುದೇ ದೂರು ದಾಖಲಿಸದೆ ಬಿಡುಗಡೆಗೊಳಿಸಲಾಯಿತು ಎಂದು ಕೊಡೈ ಹೇಳಿದರು.

ದಕ್ಷಿಣ ಕೊಲಂಬಿಯಾದಿಂದ ಸುಮಾರು 160 ಕಿಲೋ ಮೀಟರ್ ದೂರದಲ್ಲಿರುವ ಮಾಟಾರಾ ನಗರದ ಬೀಜ್ ಮತ್ತು ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಬಹಿರಂಗವಾಗಿ ಚುಂಬಿಸಿಕೊಳ್ಳುತ್ತಿರುವ ಅಶ್ಲೀಲ ವರ್ತನೆ ಬಗ್ಗೆ ಸಾರ್ವಜನಿಕರು ದೂರು ಸಲ್ಲಿಸಿದ್ದರು. ಆ ನಿಟ್ಟಿನಲ್ಲಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದರು.

ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಯುವ ಪ್ರೇಮಿಗಳು ಚುಂಬನ ದೃಶ್ಯಗಳಲ್ಲಿ ತೊಡಗಿಸಿಕೊಳ್ಳದಂತೆ ಎಚ್ಚರಿಕೆ ನೀಡಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ