ದೇಶದಲ್ಲಿನ ಅಲ್ಪಸಂಖ್ಯಾತ ಹಿಂದೂಗಳಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕೆಂದು ಪಾಕಿಸ್ತಾನದ ಹಿಂದೂ ಸಂಘಟನೆಗಳು ಸರ್ಕಾರವನ್ನು ಆಗ್ರಹಿಸಿದ್ದಾರೆ. ಅಲ್ಲದೇ ಹಿಂದೂಗಳ ದೇವಾಲಯಗಳಿಗೂ ಭದ್ರತೆ ನೀಡಬೇಕೆಂದು ಒತ್ತಾಯಿಸಿ ಮತ್ತು ಹಿಂದೂ ಉದ್ಯಮಿಯ ಹತ್ಯೆಯನ್ನು ಪ್ರತಿಭಟಿಸಿ ಕೆಲವು ಶಾಸಕರು ಬಲೂಚಿಸ್ತಾನ್ ವಿಧಾನಸಭೆಯಿಂದ ಹೊರನಡೆದಿದ್ದರು.
ಸಿಂಧ್ ಮತ್ತು ಬಲೂಚಿಸ್ತಾನದಲ್ಲಿರುವ ಹಿಂದೂಗಳು ಮತ್ತು ದೇವಾಲಯಗಳಿಗೆ ಸರ್ಕಾರ ರಕ್ಷಣೆ ಒದಗಿಸಬೇಕೆಂದು ಹಿಂದೂ ಸಂಘಟನೆಗಳು ಒತ್ತಾಯಿಸಿವೆ.
ಇತ್ತೀಚೆಗೆ ಪಾಕಿಸ್ತಾನದಲ್ಲಿ ಹಿಂದೂ ವ್ಯಾಪಾರಿಯೊಬ್ಬರನ್ನು ಹತ್ಯೆ ಮಾಡಿ, ಮಗನನ್ನು ಅಪಹರಿಸಲಾಗಿತ್ತು. ಇದನ್ನು ವಿರೋಧಿಸಿ ಹಿಂದೂಗಳು ಭಾರೀ ಪ್ರತಿಭಟನೆಯನ್ನು ನಡೆಸಿದರು.
ಅಲ್ಲದೇ ಸಿಂಧ್ ಹಾಗೂ ಬಲೂಚಿಸ್ತಾನ್ ಪ್ರಾಂತ್ಯಗಳಲ್ಲಿ ಹಿಂದೂಗಳ ಮೇಲೆ ಬಹುಸಂಖ್ಯಾತ ಮುಸ್ಲಿಮರು ಹಲ್ಲೆ ನಡೆಸುತ್ತಿದ್ದಾರೆ ಇದನ್ನು ತಡೆಯಬೇಕು ಎಂದು ಪಾಕ್ ಸರ್ಕಾರವನ್ನು ಆಗ್ರಹಿಸಿದ್ದಾರೆ.